ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಕದ್ದಮೆ ವಾಪಸ್‌ಗೆ ಆಗ್ರಹ

Last Updated 21 ಜನವರಿ 2012, 19:45 IST
ಅಕ್ಷರ ಗಾತ್ರ

ಬೆಂಗಳೂರು:  `ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಡಿಕೆ ಬೆಳೆಗಾರರಿಂದ ಬಾಕಿ ಇರುವ ಸಾಲ ವಸೂಲಾತಿಗೆ ಸಿವಿಲ್ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಿರುವುದನ್ನು ಕೂಡಲೇ ವಾಪಸ್ ಪಡೆಯಬೇಕು~ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡ ಎಚ್. ಎಂ.ನಟರಾಜ ಬಾಳೆಮನೆ ಆಗ್ರಹಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಈಗಾಗಲೇ ಕೇಂದ್ರ ಸರ್ಕಾರದಿಂದ ನೇಮಕವಾದ ಅಧಿಕಾರಿ ಗೋರಕ್‌ಸಿಂಗ್ ಅವರ ನೇತೃತೃದ ಸಮಿತಿಯು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರತಿಯೊಬ್ಬ ಅಡಿಕೆ ಬೆಳೆಗಾರರ ಹತ್ತು ಎಕರೆಗಳಷ್ಟು ಒಣಗಿದ ಬೆಳೆಗೆ ಸಾಲ ಮನ್ನಾ ಮಾಡುವಂತೆ ಶಿಫಾರಸು ಮಾಡಿದೆ~ ಎಂದರು.

`ಅಡಿಕೆ ಬೆಳೆಗೆ ಹಳದಿ ಎಲೆ ರೋಗ, ಬೇರುಹುಳು, ಸುಳಿ ಕೊರೆಯುವ ರೋಗ ಇತ್ಯಾದಿ ದೀರ್ಘಕಾಲದ ಸಮಸ್ಯೆಗಳಿಂದ ರೈತರು ಬಳಲುತ್ತಿರುವಾಗ ಏಪ್ರಿಲ್ ತಿಂಗಳೊಳಗೆ ಸಾಲ ಪಾವತಿಸಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಬೇಕು~ ಎಂದರು.

`ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದರಿಂದ ಸಾಲ ಮರುಪಾವತಿ ಮಾಡದ ರೈತರನ್ನು ಬಂಧಿಸುವ ಸಂಭವವಿದೆ. ಹೀಗಾದರೆ, ರೈತರು ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ~ ಎಂದು ಹೇಳಿದರು.

ಗೋಷ್ಠಿಯಲ್ಲಿ ರೈತರಾದ ಜಯಂತ್ ಮತ್ತು ಬಿ.ಕೆ.ರವಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT