ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಪಂದ್ಯಕ್ಕೆ ಸೆಹ್ವಾಗ್ ಲಭ್ಯ

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್ (ಪಿಟಿಐ): ವೀರೇಂದ್ರ ಸೆಹ್ವಾಗ್ ಅವರು ದೈಹಿಕ ಸಾಮರ್ಥ್ಯ ಮರಳಿ ಪಡೆದಿದ್ದು ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ಪರ ಆಡಲಿದ್ದಾರೆ.

ಸೆಂಚೂರಿಯನ್‌ನಲ್ಲಿ ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಡೇರ್‌ಡೆವಿಲ್ಸ್ ತಂಡ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಪೈಪೋಟಿ ನಡೆಸಲಿದೆ. ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಟ್ವೆಂಟಿ-20 ವಿಶ್ವಕಪ್ ವೇಳೆ `ವೀರೂ~ ಗಾಯಗೊಂಡಿದ್ದರು.

ಇದರಿಂದ ಅವರು ಚಾಂಪಿಯನ್ಸ್ ಲೀಗ್ ಟೂರ್ನಿಯ ಮೊದಲ ಕೆಲವು ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನ ಎನಿಸಿತ್ತು. ಆದರೆ ಗುರುವಾರ ನಡೆದ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅವರು `ತೇರ್ಗಡೆ~ಯಾದರು.

`ಸೆಹ್ವಾಗ್ ಗುರುವಾರ ಕರ್ಕ್ ಎಡ್ವರ್ಡ್ಸ್ ಎದುರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾದರು. ಈ ವೇಳೆ ಅವರು ಯಾವುದೇ ಸಮಸ್ಯೆ ಎದುರಿಸಲಿಲ್ಲ. ಮೊದಲ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ~ ಎಂದು ಡೆಲ್ಲಿ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT