ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್ ಕಂಪೆನಿ ಜಾಹೀರಾತು: ವಿರುದ್ಧ ನಟ ಶೈನಿ ಕೆಂಗಣ್ಣು

Last Updated 24 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಮುಂಬೈ(ಪಿಟಿಐ):ಬಾಲಿವುಡ್ ನಟ ಶೈನಿ ಅಹುಜಾ ಮೈಕ್ರೊಮ್ಯಾಕ್ಸ್ ಮೊಬೈಲ್ ಕಂಪೆನಿಯ ಜಾಹೀರಾತಿನ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಕಳೆದ ವಾರ ಮೈಕ್ರೊಮ್ಯಾಕ್ಸ್ ಕಂಪೆನಿಯು ದೀಪಾವಳಿ ನಿಮಿತ್ತ ಪ್ರಸಾರ ಮಾಡಿರುವ ವಾಣಿಜ್ಯ ಜಾಹೀರಾತಿನಲ್ಲಿ ತೇಜೋವಧೆ ಮಾಡುವಂತಹ ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಹೀಗಿರುವಾಗ ತಮ್ಮ  ತೇಜೋವಧೆ ಮಾಡುವಂತಹ ಜಾಹೀರಾತು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಹೇಳಿದ್ದಾರೆ. ಶೈನಿ ತಮ್ಮ ಮನೆಗೆಲಸದವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ವಿಚಾರಣಾ ನ್ಯಾಯಾಲಯದಿಂದ ಈಗಾಗಲೇ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಟರ್ಕಿಯಲ್ಲಿ 300 ಭಾರತೀಯರು ಸುರಕ್ಷಿತ

ನವದೆಹಲಿ (ಐಎಎನ್‌ಎಸ್): ಭಾರಿ ಭೂಕಂಪ ಸಂಭವಿಸಿರುವ ಟರ್ಕಿಯಲ್ಲಿ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಸೋಮವಾರ ವಿದೇಶಾಂಗ ಸಚಿವಾಲಯ ತಿಳಿಸಿದೆ.

`ಅಂಕಾರದಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಗೆ ದೊರೆತಿರುವ ಮಾಹಿತಿ ಪ್ರಕಾರ ಭಾರತೀಯ ಪ್ರಜೆಗಳೆಲ್ಲರೂ ಸುರಕ್ಷಿತವಾಗಿದ್ದಾರೆ~  ಎಂದು ಸಚಿವಾಲಯ ಹೇಳಿದೆ. ಟರ್ಕಿಯಲ್ಲಿ ಸುಮಾರು 300 ಜನ ಭಾರತೀಯ ಪ್ರಜೆಗಳು ನೆಲೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT