ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊರಾರ್ಜಿ ಶಾಲೆ ಪ್ರವೇಶ ಪಾರದರ್ಶಕವಾಗಿರಲಿ

Last Updated 11 ಫೆಬ್ರುವರಿ 2012, 9:55 IST
ಅಕ್ಷರ ಗಾತ್ರ

ಮಡಿಕೇರಿ: ಮೊರಾರ್ಜಿ ದೇಸಾಯಿ ಮತ್ತು ಏಕಲವ್ಯ ವಸತಿ ಶಾಲೆಗಳಿಗೆ ಪರೀಕ್ಷೆ ಹಾಗೂ ಪ್ರವೇಶ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ ಚಂದೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಏಕಲವ್ಯ ವಸತಿಶಾಲೆಯ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಪ್ರವೇಶ ಪ್ರಕ್ರಿಯೆ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಹೆಚ್ಚಿನ ಅರ್ಜಿಗಳು ಸ್ವೀಕಾರವಾಗುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಎಲ್ಲಾ ಶಾಲಾ ಶಿಕ್ಷಕರುಗಳ ಮೂಲಕವು ಪ್ರತಿ ಶಾಲೆಗಳಲ್ಲಿ ಮಾಹಿತಿ ನೀಡುವ ಪ್ರಕ್ರಿಯೆ ಆಗಬೇಕು ಎಂದು ನಿರ್ದೇಶನ ನೀಡಿದರು.

ಅರ್ಜಿಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಎಷ್ಟೇ ಒತ್ತಡವಿದ್ದರೂ ಎಚ್ಚರದಿಂದ ಗಮನಿಸಬೇಕು. ಮುಂದೆ ಅರ್ಜಿಗಳು ತಿರಸ್ಕಾರಗೊಳ್ಳದಂತೆ ಸಮರ್ಪಕವಾಗಿ ಭರ್ತಿಯಾಗಿವೆಯೇ ಎಂದು ಪರಿಶೀಲಿಸಬೇಕು. ಎಲ್ಲ ಆಕಾಂಕ್ಷಿ ವಿದ್ಯಾರ್ಥಿಗಳಿಗೂ ಅರ್ಜಿಗಳು ಲಭ್ಯವಾಗಬೇಕು. ಖಾಲಿ ಎನ್ನುವ ಉತ್ತರವನ್ನು ಯಾವುದೇ ವಸತಿ ಶಾಲೆಗಳ ಮುಖ್ಯಸ್ಥರು ತಿಳಿಸಬಾರದು ಎಂದು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಐಟಿಡಿಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಜಾರಾವ್ ಅವರು ಮಾತನಾಡಿ, ಮೊರಾರ್ಜಿ ದೇಸಾಯಿ ಹಾಗೂ ಏಕಲವ್ಯ ವಸತಿ ಶಾಲೆಗಳು ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ  ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಇರುವ ಸದಾವಕಾಶವಾಗಿದೆ ಎಂದರು.

ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರಾಜೇಶ್ ಜಿ. ಗೌಡ ಮಾತನಾಡಿ, ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮಾಧ್ಯಮ ಬೋಧನೆ ಇದ್ದು ಉಳಿದಂತೆ ವಿರಾಜಪೇಟೆ, ಬಾಳುಗೋಡು  ಕೂಡಿಗೆ  ಕೊಡ್ಲಿಪೇಟೆ  ಬಸವನಹಳ್ಳಿ ವಸತಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲಾಗುವುದು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನದ ಮಿತಿಯನ್ನು 2ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಕುಟುಂಬದ  ಆದಾಯ ಮಿತಿ ರೂ.44500 ಗಳಾಗಿರುತ್ತದೆ. ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಪ್ರವೇಶ ನೀಡಲಾಗುವುದು.

ಅರ್ಜಿಗಳನ್ನು ಆಯಾ ವಸತಿ ಶಾಲೆಗಳಲ್ಲಿ ಅಥವಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ/ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗಳಿಂದ ಫೆಬ್ರವರಿ 25ರವರೆಗೆ ಪಡೆದು ಭರ್ತಿಮಾಡಿ ಸಲ್ಲಿಸಬೇಕಿದೆ. ಮಾರ್ಚ್ 25ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.   ಐ.ಟಿಡಿ.ಪಿ ಅಧಿಕಾರಿ ಘಂಟಿ, ಶಿಕ್ಷಣಾ ಇಲಾಖೆ ಅಧಿಕಾರಿ ಸುರೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT