ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋಟಮ್ಮ ಸ್ಪಷ್ಟನೆ

Last Updated 10 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಎಂ.ಸರಿತಾ ಅವರ ಹೆಸರನ್ನು ಸದನದಲ್ಲಿ ಪ್ರಸ್ತಾಪಿಸಿಲ್ಲ. ಬಿಜೆಪಿ, ಭಜರಂಗದಳದ ಕುಮ್ಮಕ್ಕಿನಿಂದ ಆಕೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ~ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕಿ ಮೋಟಮ್ಮ ಆರೋಪಿಸಿದರು.

 `ನನ್ನ ಹೇಳಿಕೆ ತಿರುಚುವ ಕೆಲಸ ಮಾಡುತ್ತಿದ್ದಾರೆ. ಎಲ್ಲೂ ಸರಿತಾ ಹೆಸರು ಪ್ರಸ್ತಾಪಿಸಿಲ್ಲ. ಸರಿತಾಗೆ ಅನ್ಯಾಯ ಆಗಿರುವುದನ್ನು ಖಂಡಿಸಿದ್ದೇನೆ. ಯಾವುದೇ ಮಹಿಳೆಗೆ ಅನ್ಯಾಯವಾದರೂ ಕಠಿಣ ಶಿಕ್ಷೆಯಾಗಬೇಕು ಎಂಬುದನ್ನು ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬಂದಿದ್ದೇನೆ. ಕೊಡಗಿನ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ, ಅತ್ಯಾಚಾರ ಎಸಗಿದ್ದನ್ನು ಸದನದಲ್ಲಿ ಪ್ರಸ್ತಾಪಿಸಿದ್ದೆ~ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT