ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ನಾಯಕತ್ವಕ್ಕೆ ಜನಬೆಂಬಲ– ಶಾಸಕ

Last Updated 24 ಸೆಪ್ಟೆಂಬರ್ 2013, 6:48 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ಕೇಂದ್ರ ಸರ್ಕಾರದ ಭ್ರಷ್ಟ ಆಡಳಿತ, ದಿನನಿತ್ಯ ವಸ್ತುಗಳ ಬೆಲೆ ಏರಿಕೆ, ಗಡಿ ವಿವಾದ ಸಮಸ್ಯೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ತಿಳಿಸಿದರು.

ತಾಲ್ಲೂಕಿನ ಕಂಪಲಾಪುರ ಗ್ರಾಮ­ದಲ್ಲಿ ಭಾನುವಾರ ನಡೆದ ಬಿಜೆಪಿ ಶಕ್ತಿಕೇಂದ್ರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿ ಕಿತ್ತಾಟ, ಒಳಜಗಳದಿಂದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಂತಾ­ಯಿತು. ನಮ್ಮ ಒಡಕನ್ನು ಸರಿಮಾಡಿ­ಕೊಂಡರೆ ಲೋಕಸಭಾ ಚುನಾವಣೆ­ಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಬಹುದೆಂದು ವಿಶ್ವಾಸ ವ್ಯಕ್ತಪಡಿಸಿದರು.

ಸೆ. 26 ರಂದು ನರೇಂದ್ರಮೋದಿ ರಾಜ್ಯಕ್ಕೆ ಬರುತ್ತಿದ್ದು ಮಾಜಿ ಮುಖ್ಯ­ಮಂತ್ರಿ ಯಡಿಯೂರಪ್ಪ ನರೇಂದ್ರ ಮೋದಿಗೆ ಬೆಂಬಲ ಸೂಚಿಸಲಿದ್ದಾರೆ. ಬಿಜೆಪಿಗೆ ಕೆಟ್ಟ ಕಾಲ ದೂರವಾಗಿದ್ದು ಒಳ್ಳೆಯ ಕಾಲ ಬಂದಿದೆ ಎಂದರು.

ನರೇಂದ್ರಮೋದಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರುವುದರಿಂದ ಹಿಂದುಳಿದ ವರ್ಗಗಳು ಈ ಬಾರಿ ಬಿಜೆಪಿಯನ್ನು ಬೆಂಬಲಿಸಲಿವೆ ಎಂದರು. ಮೋದಿ ನಾಯಕತ್ವವನ್ನು ಮೆಚ್ಚಿ ಎಲ್ಲಾ ಪಕ್ಷದ ಯುವಕರು ಈ ಬಾರಿ ಬಿಜೆಪಿಯ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಆರ್.ಟಿ. ಸತೀಶ್, ಮುಖಂಡರಾದ ಜಿ.ಸಿ. ವಿಕ್ರಂರಾಜ್, ಬೆಮ್ಮತ್ತಿಕೃಷ್ಣ, ಲೋಕ­ಪಾಲಯ್ಯ, ರಾಜೇಗೌಡ, ಮಾಗಳಿರವಿ, ಮಹದೇವ್, ರಾಜಣ್ಣ, ಸಿ.ಕೆ. ಪ್ರಸನ್ನಕೇಶವ, ಎಸ್.ಟಿ. ಕೃಷ್ಣಪ್ರಸಾದ್, ವಿವಿಧ ಶಕ್ತಿಕೇಂದ್ರದ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT