ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪ್ರಧಾನಿಯಾಗುವ ಕಾಲಕ್ಕೆ ಬದುಕಿರಲಾರೆ

ಯು.ಆರ್‌. ಅನಂತಮೂರ್ತಿ ಖಾರದ ನುಡಿ
Last Updated 15 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು:  ‘ನರೇಂದ್ರ ಮೋದಿ ಅವರನ್ನು ಪ್ರಧಾಶನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಘೋಷಿಸಿದೆ. ಆತ ಪ್ರಧಾನಿ ಆಗಿರುವ ಕಾಲಕ್ಕೆ ನಾನು ಬದುಕಿರಲು ಇಷ್ಟಪಡುವುದಿಲ್ಲ’ ಎಂದು ಹಿರಿಯ ಸಾಹಿತಿ ಯು.ಆರ್‌. ಅನಂತಮೂರ್ತಿ ಅತ್ಯಂತ ಖಾರವಾಗಿ ಹೇಳಿದರು.

ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ‘ಅನುಸಂಧಾನ’ ಮತ್ತು ‘ದೇವರ ಗುಟ್ಟು’ ಕೃತಿಗಳ ಬಿಡುಗಡೆ  ಸಮಾರಂಭದಲ್ಲಿ  ಅವರು  ಮಾತನಾಡಿದರು. 

‘ಮೋದಿ ಪರ ಅಲೆ ಎನ್ನುವುದು ಕೇವಲ ಮಾಧ್ಯಮದ ಸೃಷ್ಟಿ’ ಎಂದು ಲೇವಡಿ ಮಾಡಿದರು.

‘ಕೋಮು ವಾದಿಗಳು, ಮುಖವಾಡ ಧರಿಸಿದವರು ಈ ದೇಶದ ಪ್ರಧಾನಿ ಆಗುವುದು ಬೇಕಿಲ್ಲ. ಆದ್ದರಿಂದಲೇ ಸಮಾಜವಾದಿ ಸಿದ್ಧಾಂತದ ಹಿನ್ನೆಲೆ ಹೊಂದಿರುವ ನಾನು ಒಂದು ಕಾಲಕ್ಕೆ ತೀವ್ರವಾಗಿ ವಿರೋಧಿಸಿದ್ದ ಕಾಂಗ್ರೆಸ್‌ ಬೆಂಬಲಕ್ಕೆ ನಿಂತಿದ್ದೇನೆ’ ಎಂದು ತಿಳಿಸಿದರು.

‘ಮೋದಿ ವಿರುದ್ಧ ಎಲ್ಲ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕು. ರಾಜ್ಯದಲ್ಲಿ ಎಸ್‌.ಎಂ. ಕೃಷ್ಣ ಅಂತಹ ಆಂದೋಲನದ ನೇತೃತ್ವ ವಹಿಸಿಕೊಳ್ಳಬೇಕು. ಕೋಮುವಾದದ ಎದುರು ಯುವಶಕ್ತಿಯನ್ನು ಕಟ್ಟಿ ನಿಲ್ಲಿಸಬೇಕು’ ಎಂದು ಹೇಳಿದರು.

‘ಮೋದಿ ಪ್ರಧಾನಿಯಾಗದಂತೆ ತಡೆಯುವ ಯತ್ನಗಳು ನಡೆಯಬೇಕು’ ಎಂದು  ಅವರು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT