ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಬಿಜೆಪಿ ಪ್ರಧಾನಿ ಅಭ್ಯರ್ಥಿ: ನಿಲುವು ಸ್ಪಷ್ಟನೆಗೆ ಒತ್ತಡ?

Last Updated 12 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಮಧ್ಯೆಯೇ, ಈ ಕುರಿತು ಶೀಘ್ರವೇ ನಿಲುವು ಸ್ಪಷ್ಟಪಡಿಸಬೇಕೆಂದು ಬಿಜೆಪಿ ಮೇಲೆ ಜೆಡಿಯು ಒತ್ತಡ ಹೇರುವ ಸಾಧ್ಯತೆ ಇದೆ.

ಏ.13-14ರಂದು ನಡೆಯಲಿರುವ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ಸಂಬಂಧ ಬಿಜೆಪಿ ಮೇಲೆ ಒತ್ತಡ ಹಾಕಬಹುದು ಎನ್ನಲಾಗಿದೆ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುವುದನ್ನು ಜೆಡಿಯು ಬಲವಾಗಿ ವಿರೋಧಿಸುತ್ತಿದ್ದು, ಈ ಕುರಿತು ಕಾರ‌್ಯಕಾರಿಣಿಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ. ಜೆಡಿಯು ಅಧ್ಯಕ್ಷ ಶರದ್‌ಯಾದವ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT