ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಗೆ ಅಡ್ವಾಣಿ ಅಭಿನಂದನೆ

Last Updated 16 ಮೇ 2014, 19:30 IST
ಅಕ್ಷರ ಗಾತ್ರ

(ನವದೆಹಲಿ ವರದಿ): ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಅವರು ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಅಭಿನಂದಿಸಿದರು. ಆದರೆ ಪಕ್ಷದ ಸಾಧನೆಯ ಸಂಪೂರ್ಣ ಹೆಗ್ಗಳಿಕೆ ಮೋದಿಗೆ ಸೇರುತ್ತದೆ ಎಂಬ ಮಾತು ಅವರಿಂದ ಬರಲಿಲ್ಲ. ಬಿಜೆಪಿ ಪ್ರಚಂಡ ವಿಜಯಕ್ಕೆ ಮೋದಿ ನಾಯಕತ್ವ  ಎಷ್ಟರ­ಮಟ್ಟಿಗೆ ಕೊಡುಗೆ ನೀಡಿದೆ ಎನ್ನುವುದನ್ನು ಮೌಲ್ಯಮಾಪನ ಮಾಡಬೇಕಿದೆ ಎಂದು ಅಡ್ವಾಣಿ ಹೇಳಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ವಿಜ­ಯೋತ್ಸವ­ದಲ್ಲಿ ಭಾಗಿ­ಯಾದ ಅವರು, ಈ ದೇಶವು ಹಿಂದೆಂದೂ ಇಂಥ ಚುನಾವಣೆ ಕಂಡಿ­ರಲಿಲ್ಲ ಎಂದು ಭಾವುಕರಾಗಿ ನುಡಿದರು. ‘ದುರಾಡಳಿತ, ಭ್ರಷ್ಟಾಚಾರ, ವಂಶ­ಪಾರಂಪರ್ಯ ಆಡಳಿತಕ್ಕೆ ಜನರು ರೋಸಿ ಹೋಗಿದ್ದರು. ಹಾಗಾಗಿಯೇ ಅವರೆಲ್ಲ ಬಿಜೆಪಿಯನ್ನು ಗೆಲ್ಲಿಸಿದ್ದಾರೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮುಖ್ಯಸ್ಥರಾಗಿ ಯಾವಾಗ ಮೋದಿ ಆಯ್ಕೆ­ಯಾದರೋ ಆವಾಗಿನಿಂದ ಅಡ್ವಾಣಿ ಅವರು ಮೋದಿ ಬಗ್ಗೆ ಅಸ­ಮಾಧಾನ ವ್ಯಕ್ತಪಡಿಸುತ್ತ ಬಂದಿದ್ದಾರೆ.  2013ರ ಜೂನ್‌ಲ್ಲಿ ಗೋವಾದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ­ಣಿಯಲ್ಲೂ ಅಡ್ವಾಣಿ ಭಾಗವಹಿಸಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT