ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಗೆ ವೀಸಾ ನಿರಾಕರಿಸಲು ಅಮೆರಿಕ ಕಾಂಗ್ರೆಸ್ ಸದಸ್ಯರ ಆಗ್ರಹ

Last Updated 4 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): 2002ರ ಕೋಮು ಗಲಭೆಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲರಾದ ಕಾರಣಕ್ಕೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ವೀಸಾ ನಿರಾಕರಿಸಿರುವ ನಿಯಮವನ್ನು ಮುಂದುವರಿಸಬೇಕು ಎಂದು ಅಮೆರಿಕ ಕಾಂಗ್ರೆಸ್‌ನ 25 ಸದಸ್ಯರು ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ನ ಜನಪ್ರತಿನಿಧಿಗಳ ಸಭೆಯ 25 ಸದಸ್ಯರು ಕ್ಲಿಂಟನ್ ಅವರಿಗೆ ಪತ್ರ ಬರೆದು, ಗುಜರಾತ್ ಕೋಮು ಗಲಭೆ ಸಂತ್ರಸ್ತರಿಗೆ ನ್ಯಾಯ ದೊರಕಿಸುವಲ್ಲಿ ಮೋದಿ ವಿಫಲರಾಗಿರುವುದರಿಂದ ಅವರಿಗೆ ವೀಸಾ ನೀಡಬಾರದು ಎಂದಿದ್ದಾರೆ.

ನ.29ಕ್ಕೆ ಬರೆದಿರುವ ಪತ್ರದ ಪ್ರತಿಯನ್ನು ರಿಪಬ್ಲಿಕನ್ ಸದಸ್ಯ ಫ್ರಾಂಕ್ ವೊಲ್ಫ್  ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದಾರೆ. ಈ ತಿಂಗಳ 13 ಮತ್ತು 17ರಂದು ಗುಜರಾತ್‌ನಲ್ಲಿ ಚುನಾವಣೆ ನಡೆಯುವುದರಿಂದ ಈ ಪತ್ರಕ್ಕೆ ಹೆಚ್ಚಿನ ಮಹತ್ವ ಬಂದಿದೆ.

ವೀಸಾ ನೀಡಬೇಕು ಎಂಬ ಮೋದಿ ಅವರ ಕೋರಿಕೆಯನ್ನು ಒಪ್ಪಿಕೊಂಡರೆ ಕೋಮು ಗಲಭೆಯ ವಿಚಾರಣೆಗೆ ಹಿನ್ನಡೆಯಾಗುತ್ತದೆ ಎಂದಿರುವ ಕಾಂಗ್ರೆಸ್ ಸದಸ್ಯರು ಮೋದಿ ಅವರ ವಿರುದ್ಧ ಗಂಭೀರ ಸ್ವರೂಪದ ಆಪಾದನೆಗಳು ಇದ್ದರೂ ಭಾರತದಲ್ಲಿ ಕೆಲವು ರಾಜಕೀಯ ಪಕ್ಷಗಳು ಅವರ ಹೆಸರನ್ನು ಪ್ರಧಾನಿ ಹುದ್ದೆಗೆ ಶಿಫಾರಸು ಮಾಡುತ್ತಿರುವ ಬಗ್ಗೆ  ಪತ್ರದಲ್ಲಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT