ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಗಚಿಯಿಂದಲೂ ಹರಿದ ನೀರು

Last Updated 6 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೇಲೂರು/ಹಾಸನ: ರೈತರ ತೀವ್ರ ವಿರೋಧದ ನಡುವೆಯೂ ಶನಿವಾರ ಬೇಲೂರಿನ ಯಗಚಿ ಜಲಾಶಯದಿಂದ 3 ಸಾವಿರ ಕ್ಯೂಸೆಕ್‌ಗೂ ಹೆಚ್ಚಿನ ನೀರನ್ನು ನದಿಗೆ ಹರಿಸಲಾಯಿತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ರೈತರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಅಣೆಕಟ್ಟೆಗೆ ಮುತ್ತಿಗೆ ಹಾಕಲು ಮುಂದಾದರು. ಪ್ರವೇಶ ದ್ವಾರಕ್ಕೆ ಹಾಕಿದ್ದ ಬೀಗ ಮುರಿದು ಒಳನುಗ್ಗಲು ಯತ್ನಿಸಿದ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನೀರು ಬಿಡುಗಡೆ ಸ್ಥಗಿತಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಅಣೆಕಟ್ಟೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪುಟ್ಟೇಗೌಡ `ಹಿರಿಯ ಅಧಿಕಾರಿಗಳ ಆದೇಶದಂತೆ ನೀರು ಬಿಡಲಾಗುತ್ತಿದೆ. ಅವರ ಆದೇಶ ಬರದೆ ನೀರು ನಿಲ್ಲಿಸಲು ಸಾಧ್ಯವಿಲ್ಲ~ ಎಂದು ಹೇಳಿದರು.

ಈ ಹೇಳಿಕೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಯಿತು. ರೈತರು ಎಂಜಿನಿಯರ್‌ಗೆ ದಿಗ್ಬಂಧನ ಹಾಕಲು ಮುಂದಾದರು. ಪೊಲೀಸರು ಪುಟ್ಟೇಗೌಡ ಅವರನ್ನು ಸುರಕ್ಷಿತವಾಗಿ ಕರೆದೊಯ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮೂರು ದಿನ ಬಂದ್ ಕರೆ: ಯಗಚಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಪ್ರತಿಭಟಿಸಿ ಸೋಮವಾರದ ವರೆಗೆ ಸತತ ಮೂರು ದಿನ ಕಾಲ ಬೇಲೂರು ಬಂದ್ ನಡೆಯಲಿದೆ.

ಹೇಮಾವತಿಯಿಂದಲೂ ನೀರು:  ಗೊರೂರಿನ ಹೇಮಾವತಿ ಜಲಾಶಯದಿಂದ ಶನಿವಾರ 14 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರು ಬಿಡಲಾಗಿದ್ದು, ಇದು ಕೆಆರ್‌ಎಸ್ ಸೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT