ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಬಂಧನದಿಂದ ಮುಜುಗರ- ಅಡ್ವಾಣಿ ಒಪ್ಪಿಗೆ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನಾಗಪುರ (ಪಿಟಿಐ):  ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೂ ಹಗರಣದಲ್ಲಿ ಸಿಲುಕಿ ಬಂಧಿತರಾಗಿರುವುದರಿಂದ ಪಕ್ಷಕ್ಕೆ ಮುಜುಗರವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಇಲ್ಲಿ ಒಪ್ಪಿಕೊಂಡರು.ಭ್ರಷ್ಟಾಚಾರದ ವಿರುದ್ಧದ ತಮ್ಮ `ಜನಚೇತನ ಯಾತ್ರೆ~ ಇಲ್ಲಿಗೆ ಬಂದ ಸಂದರ್ಭದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಯಡಿಯೂರಪ್ಪ ಕುರಿತು ಸುದ್ದಿಗಾರರು ಕೇಳಿದಾಗ ಆರಂಭದಲ್ಲಿ ಅವರು ಪ್ರಶ್ನೆಯಿಂದ ನುಣುಚಿಕೊಳ್ಳಲು ಯತ್ನಿಸಿದರು. ಆದರೆ ನಂತರ ಪಕ್ಷಕ್ಕೆ ಮುಜುಗರವಾಗಿರುವುದನ್ನು ಒಪ್ಪಿಕೊಂಡರು.

`ನಮ್ಮ ದೌರ್ಬಲ್ಯಗಳನ್ನು ನಾವು ಲಘುವಾಗಿ ಪರಿಗಣಿಸುವುದಿಲ್ಲ. ಕರ್ನಾಟಕದಲ್ಲಿ ಆದ ಬೆಳವಣಿಗೆಯೇ ಇದಕ್ಕೆ ನಿದರ್ಶನ. ಸಣ್ಣ ಪುಟ್ಟ ತಪ್ಪುಗಳಿಂದ ಪಕ್ಷಕ್ಕೆ ಮುಜುಗರವಾದ ಸಂದರ್ಭದಲ್ಲೇ ಯಡಿಯೂರಪ್ಪ ಅವರಿಗೆ ವರಿಷ್ಠರು ಎಚ್ಚರಿಕೆ ನೀಡಿದ್ದರು. ಲೋಕಾಯುಕ್ತ ವರದಿ ಸಲ್ಲಿಕೆಯಾಗುತ್ತಿದ್ದಂತೆ ಅವರು ರಾಜೀನಾಮೆ ನೀಡಬೇಕಾಯಿತು~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT