ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶಸ್ವಿನಿ ಯೋಜನೆ: ನೋಂದಣಿಗೆ ಸೂಚನೆ

Last Updated 21 ಫೆಬ್ರುವರಿ 2012, 9:00 IST
ಅಕ್ಷರ ಗಾತ್ರ

ಕೋಲಾರ: ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಯೋಜನೆಗೆ ಸಹಕಾರ ಸಂಘಗಳ ಸದಸ್ಯರು ಹೆಸರು ನೋಂದಾಯಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

2012-13ನೇ ಸಾಲಿಗೆ ಯಶಸ್ವಿನಿ ಫಲಾನುಭವಿಗಳನ್ನು ನೋಂದಾಯಿಸುವ ಕಾರ್ಯಕ್ರಮ ನಿಗದಿಗೊಳಿಸಲಾಗಿದೆ. ಫಲಾನುಭವಿಗಳನ್ನು ನೋಂದಾಯಿಸುವ, ನವೀಕರಿಸುವ ಪ್ರಕ್ರಿಯೆ ಫೆ.15ರಿಂದ ಮೇ 31ರವರೆಗೂ ನಡೆಯಲಿದೆ. 2012-13ನೇ ಸಾಲಿಗೆ ಯಶಸ್ವಿನಿ ವಾರ್ಷಿಕ ವಂತಿಗೆಯನ್ನು ಪ್ರತಿಯೊಬ್ಬರಿಗೆ ರೂ.160ರಿಂದ 210ಕ್ಕೆ ಹೆಚ್ಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೋಲಾರ ಸಹಕಾರ ಸಂಘಗಳ ಉಪನಿಬಂಧಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

2003-04ನೇ ಸಾಲಿನಿಂದ ರಾಜ್ಯದ ಗ್ರಾಮೀಣ ಸಹಕಾರಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ ಒದಗಿಸಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸ್ವಯಂ-ನಿಧಿ ಶಸ್ತ್ರ ಚಿಕಿತ್ಸಾ ಯೋಜನೆ ಯಶಸ್ವಿನಿ. ವ್ಯಕ್ತಿ ಗ್ರಾಮೀಣ ಸಹಕಾರ ಸಂಘಗಳಾದ ಸಹಕಾರ ಕೃಷಿ ಪತ್ತಿನ, ಕೃಷಿಯೇತರ ಸಹಕಾರ ಸಂಘಗಳು, ವಿವಿಧೋದ್ದೇಶ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ತೋಟಗಾರಿಕಾ ಸಹಕಾರ ಸಂಘಗಳು (ಕೃಷಿ, ತೋಟಗಾರಿಕೆ, ಹೈನುಗಾರಿಕೆ ಉತ್ಪನ್ನಗಳ ಸಂಸ್ಕರಣ ಸಹಕಾರ ಸಂಘಗಳೂ ಸೇರಿ) ಸಹಕಾರಿ ಸಕ್ಕರೆ ಕಾರ್ಖಾನೆಗಳು, ಸಹಕಾರಿ ಭೂ ಅಭಿವೃದ್ಧಿ ಬ್ಯಾಂಕ್, ಗ್ರಾಮೀಣ ಹಾಗೂ ನಗರ ಪ್ರದೇಶದ ಮೀನುಗಾರರ, ಬೀಡಿಕಾರ್ಮಿಕರ ಮತ್ತು ನೇಕಾರ ಸಹಕಾರ ಸಂಘಗಳ ಸದಸ್ಯರಾಗಿ ಕನಿಷ್ಠ 6 ತಿಂಗಳಾಗಿರಬೇಕು. ಅರ್ಜಿದಾರ ಹಾಗೂ ಅವನ ಕುಟುಂಬದ ಎಲ್ಲ ಸದಸ್ಯರು ಪ್ರತಿ ವರ್ಷ ನಿಗದಿತ ವಂತಿಗೆ ಪಾವತಿ ಮಾಡುವ ಮೂಲಕ ಯಶಸ್ವಿನಿ ಯೋಜನೆ ಸೌಲಭ್ಯ ಪಡೆಯಬಹುದು.

ಅಲ್ಲದೆ ರಾಜ್ಯದ ಗ್ರಾಮೀಣ ಪ್ರದೇಶದ ಚಲನಚಿತ್ರ ಕಲಾವಿದರು, ರಂಗಭೂಮಿ ಕಲಾವಿದರು, ಜನಪದ ಕಲಾವಿದರ ಸಾಂಸ್ಕೃತಿಕ ಅಭಿವೃದ್ಧಿ ಸಹಕಾರ ಸಂಘಗಳು, ಗ್ರಾಮೀಣ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿದ್ದು, ಕಾಫಿ ಬೆಳೆಯುವ ಜಿಲ್ಲೆಗಳ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಪ್ಲಾಂಟೇಷನ್ ಕಾರ್ಮಿಕರು, ಗ್ರಾಮೀಣ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಕೃಷಿ ಕ್ಷೇತ್ರದಿಂದ ಆಯ್ಕೆಯಾಗಿರುವ ರೈತ ಪತ್ರಕರ್ತರು (ಪಟ್ಟಣ ಪ್ರದೇಶದ ಪತ್ರಕರ್ತ ಸದಸ್ಯರನ್ನು ಹೊರತುಪಡಿಸಿ), ರಾಜ್ಯದ ಗ್ರಾಮೀಣ ಪ್ರದೇಶದಲ್ಲಿರುವ ಅಲೆಮಾರಿ, ಅರೆ-ಅಲೆಮಾರಿ ಜನಾಂಗಗಳ ವಿವಿಧೋದ್ದೇಶ ಸಹಕಾರಿ ಸಂಘಗಳು, ಇತರೆ ವಿವಿಧೋದ್ದೇಶ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಸಂಘಟಿಸಲ್ಪಟ್ಟಿರುವ ಎಲ್ಲ ಗ್ರಾಮೀಣ ಸ್ವ-ಸಹಾಯ ಗುಂಪು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು, ಗ್ರಾಮೀಣ ಪ್ರದೇಶದ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವ ಅಲ್ಪಸಂಖ್ಯಾತರು (ಮಂಗಳ ಮುಖಿಯರು) ಅಲ್ಲದೆ ಸಹಕಾರ ಸಂಘ, ಬ್ಯಾಂಕ್‌ಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಪ್ರದೇಶದ ಸ್ವ-ಸಹಾಯ ಗುಂಪು,  ಸ್ತ್ರೀಶಕ್ತಿ ಗುಂಪಿನ ಸದಸ್ಯರು-್ತ ಕುಟುಂಬದ ಸದಸ್ಯರು ಸೌಲಭ್ಯ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT