ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶಸ್ವಿನಿ ಯೋಜನೆಯಡಿ ಸೌಲಭ್ಯ ನೀಡಲು ಆಗ್ರಹ

Last Updated 25 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಡುಗೆ ಕೆಲಸಗಾರರಿಗೆ ಯಶಸ್ವಿನಿ ಯೋಜನೆಯಡಿ ಆರೋಗ್ಯ ತಪಾಸಣಾ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಜಾಮೀನು ರಹಿತ ಸಾಲ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಡುಗೆ ಕೆಲಸಗಾರರ ಮತ್ತು ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಾಧ್ಯಕ್ಷ ಸತ್ಯನಾರಾಯಣ ನುಡಿದರು.

ನಗರದಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯದಾದ್ಯಂತ 10 ಲಕ್ಷಕ್ಕೂ ಅಧಿಕ ಮಂದಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲಸಗಾರರ ಕಲ್ಯಾಣ ಮಂಡಳಿ ನೇಮಕ ಮಾಡಿಕೊಳ್ಳಬೇಕು~ ಎಂದರು.

ಮೊದಲ ಬಾರಿಗೆ ರಾಜ್ಯಮಟ್ಟದ ಸಮಾವೇಶವನ್ನು ಸೆ. 26ರಂದು ನಗರದ ಚಾಮರಾಜಪೇಟೆಯಲ್ಲಿ ಏರ್ಪಡಿಸಲಾಗುತ್ತಿದ್ದು, ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಚಿವರಾದ ಎಸ್.ಸುರೇಶ್‌ಕುಮಾರ್, ಬಿ.ಎನ್.ಬಚ್ಚೇಗೌಡ ಭಾಗವಹಿಸಲಿದ್ದಾರೆ. ಜೆಡಿಎಸ್ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT