ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿ.ಪಂ. ಅಧ್ಯಕ್ಷೆ ಬಸವರಾಜೇಶ್ವರಿ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಪಂಚಾಯಿತಿ ಮೊದಲ ಅವಧಿಯ ಉಳಿದ 10 ತಿಂಗಳಿಗೆ ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ಬಸವರಾಜೇಶ್ವರಿ ತಂಗಡಗಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಸಿದ ಪ್ರಾದೇಶಿಕ ಆಯುಕ್ತೆ ಕೆ. ರತ್ನಪ್ರಭ, ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದು, ಬಸವರಾಜೇಶ್ವರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ನೂತನ ಅಧ್ಯಕ್ಷೆಯನ್ನು ಅಭಿನಂದಿಸಿ ಮಾತನಾಡಿದ ಕೆ. ರತ್ನಪ್ರಭ, ಜಿಲ್ಲೆಯ ಅಭಿವೃದ್ಧಿಗೆ ನೂತನ ಅಧ್ಯಕ್ಷರು ಶ್ರಮಿಸಲಿ. ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಎಲ್ಲ ಸಹಕರಿಸಲಿ ಎಂದರು.
 
ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಸದಸ್ಯರು, ಸ್ಥಾಯಿ ಸಮಿತಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ನೂತನ ಅಧ್ಯಕ್ಷೆ ಬಸವರಾಜೇಶ್ವರಿ ಅವರನ್ನು ಅಭಿನಂದಿಸಿದರು. ಇದನ್ನು ಸ್ವೀಕರಿಸಿದ ನೂತನ ಅಧ್ಯಕ್ಷೆ ಬಸವರಾಜೇಶ್ವರಿ ತಂಗಡಗಿ, ಜಿಲ್ಲೆಯಲ್ಲಿ ಉದ್ಭವಿಸಿರುವ ಬರದ ಸ್ಥಿತಿ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮೊದಲ ಅವಧಿಗೆ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಒಳ ಒಪ್ಪಂದ ಪ್ರಕಾರ ಅನಸೂಯಾ ಬೋರಬಂಡ್ ಹಾಗೂ ಬಸವರಾಜೇಶ್ವರಿ ಅವರಿಗೆ ತಲಾ 10 ತಿಂಗಳು ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿತ್ತು. ಅದರಂತೆ ಶಹಾಪುರ ತಾಲ್ಲೂಕಿನ ಗೋಗಿ ಕೆ. ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಸವರಾಜೇಶ್ವರಿ ತಂಗಡಗಿ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾಧಿಕಾರಿ ಗುರನೀತ ತೇಜ್ ಮೆನನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿರೂಪಾಕ್ಷಪ್ಪ ಕರಣಗಿ, ಸ್ಥಾಯಿ ಸಮಿತಿ ಅಧ್ಯಕ್ಷಾದ ದೇವರಾಜ ನಾಯಕ, ಹನುಮೇಗೌಡ ಮರಕಲ್, ಹಣಮವ್ವ ಸೊಲ್ಲಾಪುರ, ಪ್ರತಿಪಕ್ಷದ ನಾಯಕ ಎಚ್.ಸಿ. ಪಾಟೀಲ ಸೇರಿದಂತೆ 19 ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT