ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ

Last Updated 5 ಜನವರಿ 2011, 10:25 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಯಾದಗಿರಿ ಜಿ.ಪಂ.ನಲ್ಲಿ ಸ್ಪಷ್ಟ ಬಹುಮತ ಪಡೆದಿದೆ.

ಜಿ.ಪಂ. ಒಟ್ಟು 22 ಸ್ಥಾನಗಳ ಪೈಕಿ ಕಾಂಗ್ರೆಸ್ 15 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ ಕೇವಲ ಏಳು ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಿದೆ.

ಜಿಲ್ಲೆಯ ಮೂರು ತಾಲ್ಲೂಕು ಪಂಚಾಯಿತಿಗಳ ಪೈಕಿ ಯಾದಗಿರಿ ಹಾಗೂ ಸುರಪುರ ತಾ.ಪಂ.ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಶಹಾಪುರ ತಾ.ಪಂ.ನಲ್ಲಿ ಬಹುಮತಕ್ಕೆ ಒಂದು ಸ್ಥಾನದ ಕೊರತೆ ಅನುಭವಿಸಿದೆ.

ಯಾದಗಿರಿ ತಾ.ಪಂ. ಒಟ್ಟು 26 ಸ್ಥಾನಗಳ ಪೈಕಿ ಕಾಂಗ್ರೆಸ್ 15, ಬಿಜೆಪಿ 10, ಜೆಡಿಎಸ್ ಒಂದು ಸ್ಥಾನ ಗಳಿಸಿವೆ. ಸುರಪುರ ತಾ.ಪಂ.ನ ಒಟ್ಟು 30 ಸ್ಥಾನಗಳ ಪೈಕಿ ಕಾಂಗ್ರೆಸ್ 18, ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿವೆ. ಶಹಾಪುರ ತಾ.ಪಂ.ನ 25 ಸ್ಥಾನಗಳಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ 10, ಜೆಡಿಎಸ್ ಎರಡು, ಒಬ್ಬ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT