ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಜಿಸಿ ವೇತನ ಬಾಕಿ ಬಿಡುಗಡೆಗೆ ಒತ್ತಾಯ

Last Updated 3 ಜನವರಿ 2014, 20:05 IST
ಅಕ್ಷರ ಗಾತ್ರ

ಬೆಂಗಳೂರು: ಯುಜಿಸಿ ವೇತನ ಶ್ರೇಣಿ ಅನ್ವಯ ಬಾಕಿ ಇರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ 15 ಸಾವಿರಕ್ಕಿಂತಲೂ ಅಧಿಕ ಮಂದಿಗೆ 2006ರ ಜೂನ್‌ 1 ರಿಂದ ಪಾವತಿಸಬೇಕಾ­ಗಿರುವ ಬಾಕಿ ಹಣವನ್ನು ಇದುವರೆಗೆ ನೀಡಿಲ್ಲ ಎಂದು ಸಂಘದ ಅಧ್ಯಕ್ಷ ಟಿ.ಎಂ.­ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಭಾಗ್ಯವಾನ ಎಸ್‌.ಮುದ್ರಿಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಾಕಿ ವೇತನವು ಕೇಂದ್ರ ಸರ್ಕಾರದ ಅನುದಾನವಾಗಿದೆ. ರಾಜ್ಯ ಸರ್ಕಾರ ಅದನ್ನು ನೀಡದೆ ಇರುವುದು ಸರಿಯಲ್ಲ. ಸರ್ಕಾರದ ಶಿಕ್ಷಕ ವಿರೋಧಿ ನೀತಿಯನ್ನು ಖಂಡಿಸಿ ಈ ತಿಂಗಳ ಮೂರನೇ ವಾರದಲ್ಲಿ ಮುಷ್ಕರ ನಡೆಸಲು ಸಂಘವು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT