ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎ ಸರ್ಕಾರ ಉರುಳಿಸಲು `ಹಿರಿಯ ನಾಯಕ' ಭೇಟಿ-ಗಡ್ಕರಿ

Last Updated 12 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನಾಗಪುರ (ಪಿಟಿಐ): ಕಾಂಗ್ರೆಸ್ ನೇತೃತ್ವದ ಯುಪಿಎ-2 ಕೇಂದ್ರ ಸರ್ಕಾರವನ್ನು ಉರುಳಿಸಲು ಹಿರಿಯ ನಾಯಕರೊಬ್ಬರು ತಮ್ಮನ್ನು ಭೇಟಿ ಮಾಡಿದ್ದರು ಎಂದು ಬಿಜೆಪಿ ಮಾಜಿ  ಅಧ್ಯಕ್ಷ ನಿತಿನ್ ಗಡ್ಕರಿ ಹೇಳಿದ್ದಾರೆ.

`ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹಿರಿಯ ಮುಖಂಡರೊಬ್ಬರು ನನ್ನ ಜತೆ ಸಂಪರ್ಕದಲ್ಲಿದ್ದರು. ಆದರೆ, ನಾನು ಅವರ ಸಲಹೆಯನ್ನು ತಿರಸ್ಕರಿಸಿದ್ದೆ' ಎಂದು ತಿಳಿಸಿರುವ ಅವರು, ಆ ಹಿರಿಯ ಮುಖಂಡ ಯಾರು ಎನ್ನುವುದು ಹೇಳಿಲ್ಲ.

`ನಾನು ಸಿದ್ಧಾಂತಗಳನ್ನು ನಂಬಿರುವ ವ್ಯಕ್ತಿ. ನನಗೆ ಏನಾದರೂ ಮಾಡಬೇಕು ಅನಿಸಿದರೆ ಅದನ್ನು ಸಾರ್ವಜನಿಕವಾಗಿಯೇ ಮಾಡುತ್ತೇನೆ. ಬೆನ್ನ ಹಿಂದೆ ಚೂರಿ ಹಾಕುವ ಕೆಲಸ ಮಾಡುವುದಿಲ್ಲ' ಎಂದಿದ್ದಾರೆ. ಗುರುವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, `ನನ್ನ ಅಂತರ್ವಾಣಿ ಶುದ್ಧವಾಗಿದೆ. ಯಾವುದೇ ತಪ್ಪು ಮಾಡಿಲ್ಲ. ಅಲ್ಲದೇ ಪ್ರತ್ಯೇಕ ಅಜೆಂಡಾ ಹೊಂದಿಲ್ಲ.' ಎಂದು ಸ್ಪಷ್ಟಪಡಿಸಿದರು. ಗಡ್ಕರಿ ಒಡೆತನದ ಪೂರ್ತಿ ಸಮೂಹಕ್ಕೆ ಸೇರಿದ ಕಂಪೆನಿಗಳಲ್ಲಿ ಅಕ್ರಮವಾಗಿ ಹಣ ಹೂಡಿದ್ದಾರೆ ಎನ್ನುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT