ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎ ಸರ್ಕಾರ ಶೀಘ್ರ ಪತನ

ಶರದ್ ಪವಾರ್ ಸುಳಿವು
Last Updated 13 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಥಾಣೆ (ಐಎಎನ್‌ಎಸ್): `ಡಿಎಂಕೆ ಬೆಂಬಲ ವಾಪಸ್ ಪಡೆದ ನಂತರ ಕೇಂದ್ರ ಯುಪಿಎ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಪತನವಾಗಿ, ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ' ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸುಳಿವು ನಿಡಿದ್ದಾರೆ. 

`ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಈ ವಿಚಾರವನ್ನು ತಿಳಿಸಿದ್ದೇನೆ. ಅವರೂ ಇದೇ ಅಭಿಪ್ರಾಯ ಹೊಂದಿದ್ದು, ಚುನಾವಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ನಾನು ಮಾಡಿದ ಸಲಹೆಗೆ ಸಹಮತ ವ್ಯಕ್ತಪಡಿಸಿದ್ದಾರೆ' ಎಂದು ತಿಳಿಸಿದರು.
`ಯಾವುದೇ ಕ್ಷಣದಲ್ಲಿ ಎದುರಾಗಬಹುದಾದ ಚುನಾವಣೆಗೆ  ಸನ್ನದ್ಧರಾಗಬೇಕಿದೆ' ಎಂದರು.

ಪಕ್ಷದ ಪ್ರಧಾನಿ ಅಭ್ಯರ್ಥಿ ಕುರಿತು ಕೇಳಲಾದ ಪ್ರಶ್ನೆಗೆ `ಯುಪಿಎ ಮೈತ್ರಿಕೂಟದ ಅತಿ ದೊಡ್ಡ ಪಕ್ಷ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸಲಿದೆ' ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT