ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ ಪರೀಕ್ಷೆ ಮಾರ್ಪಾಡಿಗೆ ಶಿಫಾರಸು

Last Updated 6 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಸಕ್ತ ಸನ್ನಿವೇಶಕ್ಕೆ ಸರಿ ಹೊಂದುವಂತೆ ಪ್ರತಿಷ್ಠಿತ ನಾಗರಿಕ ಸೇವಾ ಪರೀಕ್ಷೆಯಲ್ಲಿ ಬದಲಾವಣೆ ತರಬೇಕೆಂದು ಕೇಂದ್ರೀಯ ನಾಗರಿಕ ಸೇವಾ ಆಯೋಗ (ಯುಪಿಎಸ್‌ಸಿ) ಸರ್ಕಾರಕ್ಕೆ ಶಿಫಾರಸು ಮಾಡಿದೆ.

`ಈಗಿರುವ ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಬದಲಾವಣೆ ಮಾಡುವಂತೆ ಯುಪಿಎಸ್‌ಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ' ಎಂದು ಸಾರ್ವಜನಿಕ ಕುಂದುಕೊರತೆ, ಸಿಬ್ಬಂದಿ ಮತ್ತು ಪಿಂಚಣಿ ಖಾತೆ ಸಚಿವ ವಿ. ನಾರಾಯಣಸ್ವಾಮಿ ಗುರುವಾರ ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

`ಯುಪಿಎಸ್‌ಸಿ ಮಾಡಿರುವ ಸಲಹೆಗೆ ಸಂಬಂಧಿಸಿದಂತೆ ಸರ್ಕಾರ ಇಲ್ಲಿಯವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ' ಎಂದು ಅವರು ಹೇಳಿದ್ದಾರೆ. ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. ಅರುಣ್ ಎಸ್. ನಿಗವೇಕರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯು ಈ ಕುರಿತು ವರದಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT