ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಸಂಸತ್‌ನಲ್ಲೂ ಕಾವೇರಿದ ಪ್ರತಿಭಟನೆ

Last Updated 6 ಅಕ್ಟೋಬರ್ 2012, 6:20 IST
ಅಕ್ಷರ ಗಾತ್ರ

ಶಿವಮೊಗ್ಗ:  ಕಾವೇರಿ ವಿವಾದವನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಿ ಲೋಕಸಭೆ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದರು.

ಸರ್ಕಾರದಿಂದ ಸೂಕ್ತ ಪ್ರತಿಕ್ರಿಯೆ ಬರದಿದ್ದಾಗ ಸದನದ ಬಾವಿಗಿಳಿದು ಪ್ರತಿಭಟಿಸಿ, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು!

ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನಾ ಇಲಾಖೆ ಹಾಗೂ ಪದವಿಪೂರ್ವ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ `ಯುವ ಸಂಸತ್ ಅಣಕು ಸ್ಪರ್ಧೆ~ಯಲ್ಲಿ ನಡೆದ ತುಣುಕುಗಳಿವು.

ಕಲಾಪದ ಆರಂಭದಲ್ಲಿ ವಿರೋಧಪಕ್ಷದ ನಾಯಕಿ ಡಿ.ಎನ್. ಲಕ್ಷ್ಮೀ ಮಾತನಾಡಿ, ಕರ್ನಾಟಕದಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರ ಭುಗಿಲೆದ್ದಿದೆ. ಹಲವು ದಶಕಗಳಿಂದ ವಿವಾದವನ್ನು ಬಗೆಹರಿಸಿಲ್ಲ ಎಂದು ಖಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನ ಮಂತ್ರಿ ಸುಷ್ಮಿತಾ, ಸುಪ್ರೀಂಕೋರ್ಟ್ ತೀರ್ಪಿನಂತೆ ನೀರನ್ನು ಬಿಡಲಾಗಿದೆ. ಸಮಸ್ಯೆ ಬಗೆಹರಿಸಲು ರಾಜ್ಯಗಳಿಗೆ ನಿಯೋಗ ಕಳುಹಿಸಲಾಗಿದೆ. ತಜ್ಞ ಸಮಿತಿ ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ರೈತರ ಸಾಲಾ ಮನ್ನಾ ಮಾಡುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದರು. ಸದನದಲ್ಲಿ ಮಹಿಳಾ ಮೀಸಲಾತಿ, ವಿದೇಶಿ ನೇರ ಬಂಡವಾಳ ಹೂಡಿಕೆ, ಶಿಕ್ಷಣ ಹಕ್ಕು ಕಾಯ್ದೆ ಕುರಿತು ಚರ್ಚಿಸಲಾಯಿತು.

ಜಿಲ್ಲೆಯ 112 ಕಾಲೇಜುಗಳ 60 ವಿದ್ಯಾರ್ಥಿಗಳು ಅಣಕು ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಗೆದ್ದ ಇಬ್ಬರು ವಿದ್ಯಾರ್ಥಿಗಳನ್ನು ಡಿಸೆಂಬರ್ ಅಂತ್ಯದಲ್ಲಿ  ನಡೆಯಲಿರುವ ರಾಜ್ಯಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆಗೆ ಕಳುಹಿಸಲಾಗುತ್ತದೆ.

ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಸದಸ್ಯ ನಾಗರಾಜ್ ಕಂಕಾರಿ, ಡಿಡಿಪಿಯು ನಾಗರಾಜ್, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರಿರಂಗಯ್ಯ, ಯುವ ಸಂಸತ್ ಕಲಾಪ ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT