ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರು, ವಿದ್ಯಾರ್ಥಿಗಳ ಕಡೆಗೆ ಗಮನ ನೀಡಿ

Last Updated 15 ಸೆಪ್ಟೆಂಬರ್ 2011, 3:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಯುವಕರು ಹಾಗೂ ವಿದ್ಯಾರ್ಥಿಗಳ ಕಡೆಗೆ ಹೆಚ್ಚು ಗಮನ ನೀಡುವಂತೆ ಜೆಡಿಎಸ್ ಕಾರ್ಯಕರ್ತರಿಗೆ ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ ಸಲಹೆ ನೀಡಿದರು.ನಗರದಲ್ಲಿ ಬುಧವಾರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಪಕ್ಷದ ಬೆಳವಣಿಗಾಗಿ ಯುವಕರು ಹಾಗೂ ವಿದ್ಯಾರ್ಥಿಗಳು ಸಾಕಷ್ಟು ಬೆವರು ಹರಿಸಿದ್ದಾರೆ. ಅದನ್ನು ಮರೆಯಬಾರದು. ಅವರ ಕಾರ್ಯವನ್ನು ಪರಿಗಣಿಸಿ ಅವರಿಗಾಗಿಯೇ ಸಮಿತಿಯೊಂದನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಮತದಾರರು ಪರವಾಗಿದ್ದಾರೆ ಎಂದು ಈಗಾಗಲೇ ಮನವರಿಕೆಯಾಗಿದೆ. ಹೀಗಾಗಿ ಗೆಲುವು ಖಚಿತ ಎಂದು ಅವರು ಹೇಳಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ರಾಜಣ್ಣ ಕೊರವಿ, ಬಿಜೆಪಿ ಸರ್ಕಾರದ ಮುಖಕ್ಕೆ ಭ್ರಷ್ಟಾಚಾರದ ಮಸಿ ಅಂಟಿಕೊಂಡಿದೆ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್.ಎನ್. ಕೋನರಡ್ಡಿ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರಾಜಕುಮಾರ ಕಾಮರೆಡ್ಡಿ, ಮುಖಂಡರಾದ ಇಸ್ಮಾಯಿಲ್ ಕಾಲೇಬುಡ್ಡೆ, ವಿ.ಐ. ಅಳಗುಂಡಗಿ, ನಗರ ಘಟಕದ ಅಧ್ಯಕ್ಷ ಎಂ.ಆರ್. ಯರಗಟ್ಟಿ, ಗ್ರಾಮೀಣ ಘಟಕದ ಅಧ್ಯಕ್ಷ ಗಜಾನನ ಅಣವೇಕರ, ಸುರೇಶ ಹಿರೇಮಠ, ವಿಜಯಲಕ್ಷ್ಮಿ ಲೂತಿಮಠ, ಸುರೇಶ ಹಿರೇಮಠ, ದಮಯಂತಿ ಅಣ್ಣಿಗೇರಿ, ರಾಜೇಶ್ವರಿ ಅಡವಿಮಠ, ಹನುಮಂತಪ್ಪ ಬಂಕಾಪುರ, ಗುರಯ್ಯ ವಿರಕ್ತಿಮಠ, ಪತ್ತೇ ಯರಗಟ್ಟಿ, ಲೋಕೇಶ ಜಾಧವ, ಮೇಘರಾಜ ಹಿರೇಮನಿ, ಬಾಳು ದಾನಿ, ಎಂ.ಎಫ್. ಹಿರೇಮಠ, ಅವಿನಾಶ ಪಾಂಡೆ, ಮೋಹನ ಅರ್ಕಸಾಲಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT