ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯು.ವಿ.ಸಿಂಗ್ ಮೇಲೆ ಹಲ್ಲೆ : ಇಂದು ವರದಿ ಸಲ್ಲಿಕೆ

Last Updated 24 ಫೆಬ್ರುವರಿ 2011, 19:55 IST
ಅಕ್ಷರ ಗಾತ್ರ

ಬೆಂಗಳೂರು: ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಯು.ವಿ.ಸಿಂಗ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರು ಜಲ ಮಂಡಳಿ ರಚಿಸಿದ್ದ ಏಕ ಸದಸ್ಯ ಸಮಿತಿ ಶುಕ್ರವಾರ ವರದಿ ಸಲ್ಲಿಸಲಿದೆ.

‘ವರದಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಹೇಳಿಕೆಗಳನ್ನು ಪಡೆಯಲಾಗಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಶಿಫಾರಸು ಮಾಡಲಾಗಿದೆ. ವರದಿಯ ವಿವರಗಳನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಪಿ.ಬಿ.ರಾಮಮೂರ್ತಿ ಬಹಿರಂಗ ಪಡಿಸಲಿದ್ದಾರೆ’ ಎಂದು ಸಮಿತಿ ಅಧ್ಯಕ್ಷ ಎಸ್.ಪಿ.ರುದ್ರಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

ನ್ಯಾಯಾಂಗ ಬಂಧನ: ಸಿಂಗ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದ ಶರವಣ, ಪಳನಿ, ಅಶೋಕ, ದೀನಾ, ರವಿ ಮತ್ತು ಬಾಬು ಅವರನ್ನು ಮಾರ್ಚ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿತು.

 ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಆದರೆ ಪೊಲೀಸರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT