ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂಸುಫ್ ರಜಾ ಗಿಲಾನಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Last Updated 13 ಮೇ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಪಾಕಿಸ್ತಾನದ ಪ್ರಧಾನಿ ಯೂಸುಫ್ ರಜಾ ಗಿಲಾನಿ ಅವರು ಮುಂದಿನ ವಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ.

ಅರ್ಜಿಯನ್ನು ಸಿದ್ಧ ಪಡಿಸುತ್ತಿರುವುದಾಗಿ ಗಿಲಾನಿ ಪರ ವಕೀಲ ಐತ್‌ಜಾಜ್ ಎಹಸಾನ್ ನೀಡಿರುವ ಹೇಳಿಕೆಯನ್ನು `ಡೈಲಿ ಟೈಮ್ಸ~ ವರದಿ ಮಾಡಿದೆ.

ಸ್ವಿಟ್ಜರ್ಲೆಂಡ್‌ನಲ್ಲಿ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆಯ ಪ್ರಕರಣವಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಪ್ರಧಾನಿಗೆ ನಿರ್ದೇಶನ ನೀಡಿತ್ತು.
ಆದರೆ, ಸ್ವದೇಶ ಮತ್ತು ವಿದೇಶಗಳಲ್ಲಿ ಕ್ರಮ ಕೈಗೊಳ್ಳುವುದಕ್ಕೆ ಅಧ್ಯಕ್ಷರಿಗೆ ವಿನಾಯ್ತಿ ನೀಡಲಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗದು ಎಂದು ಗಿಲಾನಿ ಕೋರ್ಟ್‌ಗೆ ತಿಳಿಸಿದ್ದರು. ಇದು ನ್ಯಾಯಾಲಯದ `ಅವಹೇಳನ~ ಎಂದು ಪರಿಗಣಿಸಿ, ಪ್ರಧಾನಿ ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT