ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಮಾಹಿತಿ ಪಡೆಯಿರಿ: ಸಂಸದ

Last Updated 18 ಅಕ್ಟೋಬರ್ 2012, 7:45 IST
ಅಕ್ಷರ ಗಾತ್ರ

ಕೊಳ್ಳೇಗಾಲ: ನವ ಭಾರತ ನಿರ್ಮಾಣದಲ್ಲಿ ರಾಜೀವ್‌ಗಾಂಧಿ ಮಾಹಿತಿ ಕೇಂದ್ರ ಮಹತ್ವದ ಪಾತ್ರ ವಹಿಸಲಿದೆ ಎಂದು ಸಂಸದ  ಆರ್.ಧ್ರುವನಾರಾಯಣ ತಿಳಿಸಿದರು.

ಟಗರಪುರ ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಮಾಹಿತಿ ಸೇವಾ ಕೆಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವಿವಿಧ ಇಲಾಖೆಗಳ ಮೂಲಕ ದೊರೆ ಯುವ ವಿವಿಧ ಯೋಜನೆಗಳ ಮಾಹಿತಿ ಗ್ರಾಮೀಣ ಜನತೆಗೆ ಈ ಮಾಹಿತಿ ಕೇಂದ್ರದ ಮೂಲಕ ಲಭ್ಯವಾಗಲಿದೆ. ಜನರು ಸರ್ಕಾರದ ಯೋಜನೆಗಳ ಬಗ್ಗೆ ಅರಿವನ್ನು ಪಡೆದು ಸರ್ಕಾರದ ಯೋಜ ನೆಗಳ ಸದ್ಬಳಕೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಜನತೆ ನೆಮ್ಮದಿಯ ಜೀವನ ನಡೆಸಲು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮಹತ್ವ ಪೂರ್ಣ ಯೋಜನೆಯಾಗಿದೆ. ಈ ಯೋಜನೆ ಬಗ್ಗೆ ಮಾಹಿತಿ ಪಡೆದು ಸಮರ್ಪಕವಾಗಿ ಬಳಸಿಕೊಳ್ಳಲು ಗ್ರಾಮೀಣ ಜನರು ಮುಂದೆ ಬರಬೇಕು ಎಂದು ಹೇಳಿದರು.

ಶಾಸಕ ಜಿ.ಎನ್.ನಂಜುಂಡಸ್ವಾಮಿ, ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳ ಜನರಿಗೆ ಮೂಲಭೂತ ಸೌಲಭ್ಯಗಳನ್ನು ದೊರಕಿಸುವಲ್ಲಿ ಹೆಚ್ಚಿನ ಒತ್ತುನೀಡಿದೆ. ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ, ಚರಂಡಿ ಗಳನ್ನು ನಿರ್ಮಾ ಣಮಾಡಲಾಗುತ್ತಿದೆ. ಗ್ರಾಮೀಣ ಸಂಪರ್ಕ ರಸ್ತೆಗಳನ್ನು ಉತ್ತಮಪಡಿಸಲಾಗಿದೆ. ಪ್ರತಿಯೊ ಬ್ಬರಿಗೂ ಸೂರು ದೊರೆಯುವಂತೆ ಮಾಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನಮಾಡಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ನಾಗಶ್ರೀಪ್ರತಾಪ್, ಉಪಾಧ್ಯಕ್ಷ ಮಹಾದೇವಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಯಶೋಧಪ್ರಭುಸ್ವಾಮಿ, ಕೊಪ್ಪಾಳಿ ಮಹದೇವನಾಯಕ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗಲಾಂಬಿಕ, ಉಪಾಧ್ಯಕ್ಷ ಮಲ್ಲಯ್ಯ, ಸದಸ್ಯ ಸಿ.ಮೂರ್ತಿ, ಟಗರಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ರೇವಣ್ಣ, ಉಪಾಧ್ಯಕ್ಷೆ ಜಯಮ್ಮ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ್‌ರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಸ್.ಮಹಾದೇವಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರ ನಿಂಗಶೆಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ರಂಗಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಳ್ಳೂರು ಪ್ರಭುಸ್ವಾಮಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT