ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ವಿವರಣೆಗೆ ಜನರ ಆಗ್ರಹ

ಈಚನಾಳ: ಜನಸ್ಪಂದನ ಸಭೆ
Last Updated 12 ಡಿಸೆಂಬರ್ 2013, 8:19 IST
ಅಕ್ಷರ ಗಾತ್ರ

ಲಿಂಗಸುಗೂರು: ತಾಲ್ಲೂಕಿನ ಈಚನಾಳ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಈಚೆಗೆ ಆಯೋಜಿಸಿದ್ದ ಜನಸ್ಪಂದನ ಸಭೆ ಆರಂಭಗೊಳ್ಳುತ್ತಿದ್ದಂತೆ  ಸಭೆಯಲ್ಲಿ ಪಾಲ್ಗೊಂಡಿದ್ದ ಜನರು  ಇಲಾಖೆಗಳಲ್ಲಿ ನ ಯೋಜನೆಗಳ ವಿವರಣೆ ನೀಡುವಂತೆ ಒತ್ತಾಯಿಸಿದರು.

ಈಚನಾಳ ಗ್ರಾಮದಲ್ಲಿ ಸಮಸ್ಯೆಗಳಿವೆ. ಹಳೆಯ ಓವರ್‌ಹೆಡ್‌ ಟ್ಯಾಂಕ್‌ ಕುಸಿಯುವ ಹಂತದಲ್ಲಿದೆ. ಹೊಸ ಟ್ಯಾಂಕ್‌ಗೆ ನೀರು ತುಂಬಿಸಲು ಆಗುತ್ತಿಲ್ಲ. ಗ್ರಾಮದ ವಾರ್ಡ್‌ಗಳು ಗಬ್ಬೆದ್ದು ನಾರುತ್ತಿವೆ ಎಂದು ಸಮಸ್ಯೆಗಳ ಪಟ್ಟಿಯನ್ನೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಬಿಚ್ಚಿಟ್ಟರು.

ಸರ್ಕಾರ ಘೋಷಣೆ ಮಾಡಿದ ಯಾವುದೇ ಯೋಜನೆಗಳು ಸಮರ್ಪಕ­ವಾಗಿ ಗ್ರಾಮೀಣ ಪ್ರದೇಶಗಳಿಗೆ ಬಂದಿಲ್ಲ. ಪ್ರತಿಯೊಂದು ಇಲಾಖೆ ಅಧಿ­ಕಾರಿಗಳು ಹಾಜರಿದ್ದು ಮನೆ ಮನೆಗೆ ತೆರೆಳಿ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಯಾವುದೇ ಮಾಹಿತಿ ನೀಡದೇ, ಏಕಾಏಕಿ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳುತ್ತಿರುವುದನ್ನು ಖಾಜಾವಲಿ ಮತ್ತು ಪಿಡ್ಡನಗೌಡ ವಿರೋಧಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂ­ತೇಶ ಕರಡಕಲ್ಲ ಉದ್ಘಾಟಿಸಿ­ದರು. ತಾಲ್ಲೂಕು ಪಂಚಾಯಿತಿ ಉಪಾ-­ಧ್ಯಕ್ಷ ಮಾನಪ್ಪ ಚವ್ಹಾಣ ಸೇರಿದಂತೆ ಚುನಾಯಿತ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT