ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಸದುಪಯೋಗಪಡಿಸಿಕೊಳ್ಳಿ: ಪಾಟೀಲ

Last Updated 8 ಅಕ್ಟೋಬರ್ 2011, 6:50 IST
ಅಕ್ಷರ ಗಾತ್ರ

ಗದಗ: ಕುಟುಂಬ ನಿರ್ವಹಣೆಯಲ್ಲಿ ಆರ್ಥಿಕ ಸ್ವಾವಲಂಬಿ ಕೈಗೊಳ್ಳಲು ಶ್ರಮಶಕ್ತಿ ಹಾಗೂ ಕಿರು ಸಾಲದ ಯೋಜನೆ ಜಾರಿಗೆ ತರಲಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ನಗರದ ಡಾ. ಜಾಕೀರ್ ಹುಸೇನ್ ಶಾದಿ ಮಹಲ್‌ನಲ್ಲಿ ಶುಕ್ರವಾರ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಶ್ರಮಶಕ್ತಿ ಮತ್ತು ಕಿರು ಸಾಲದ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು.

ಅಲ್ಪಸಂಖ್ಯಾತರು ಸ್ವ ಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಸಬಲರಾಗಲು ಕಿರು ಸಾಲದ ಯೋಜನೆ ಸಹಕಾರಿಯಾಗಿದೆ. ಸಣ್ಣ ಉದ್ದಿಮೆ, ಗುಡಿ ಕೈಗಾರಿಕೆ ಸ್ಥಾಪಿಸಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರ ಅಲ್ಪಸಂಖ್ಯಾತರಿಗಾಗಿ ಸುಮಾರು 86 ಲಕ್ಷ ರೂಪಾಯಿಗಳನ್ನು ಶ್ರಮಶಕ್ತಿ ಹಾಗೂ ಕಿರುಸಾಲದ ರೂಪದಲ್ಲಿ ಸಹಾಯಧನ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಸಮಾಜದಲ್ಲಿ ಏಕತೆ ಸಾಧಿಸಲು ವಿದ್ಯಾಭ್ಯಾಸ ಅತಿ ಮುಖ್ಯ. ಮಕ್ಕಳನ್ನು ದೇಶದ ಸತ್ಪ್ರಜೆಗಳನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಶ್ರೀಶೈಲಪ್ಪ ಬಿದರೂರ ಮಾತನಾಡಿ, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಸಾಕಷ್ಟು ಅನುದಾನವನ್ನು ಬಿಡುಗಡೆಗೊಳಿಸಿದೆ. ಅವುಗಳ ಸದುಪಯೋಗ ಪಡೆದುಕೊಂಡು ಅಲ್ಪಸಂಖ್ಯಾತರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.

ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದ್ದು, ಮೂಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ಗೋನಾಳ, ನಗರ ಸಭೆ ಸದಸ್ಯ ಶಿರಾಜ್ ಬಳ್ಳಾರಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಕರಿಗೌಡರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬೀರಪ್ಪ ಬಂಡಿ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT