ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕರೆ

Last Updated 6 ಜನವರಿ 2012, 8:25 IST
ಅಕ್ಷರ ಗಾತ್ರ

ಸಾಗರ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಹಣ ಹರಿದು ಬರುತ್ತಿದ್ದು, ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳು ಹಾಗೂ ನೌಕರರ ಮೇಲೆ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರುಹೇಳಿದರು.

ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ್ಙ 36 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗಿರುವ ಸಾಮರ್ಥ್ಯಸೌಧ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಇಡೀ ತಾಲ್ಲೂಕಿನ ಆಡಳಿತ ವ್ಯವಸ್ಥೆಯ ಪ್ರಮುಖ ಕೇಂದ್ರವಾಗಿರುವ ತಾಲ್ಲೂಕು ಪಂಚಾಯ್ತಿಗೆ ಸೂಕ್ತ ಕಟ್ಟಡವಿಲ್ಲದೇ ಇರುವುದು ಕೊರತೆಯಾಗಿತ್ತು.ಈಗ ಆ ಕೊರತೆ ನೀಗಿದಂತಾಗಿದೆ ಎಂದರು.

ಈಗ ನಿರ್ಮಿಸಲಾಗಿರುವ ಸಾಮರ್ಥ್ಯ ಸೌಧದ ಮೊದಲ ಅಂತಸ್ತನ್ನು ನಿರ್ಮಿಸುವ ಯೋಜನೆ ಇದೆ. ಇದರ ಜತೆಗೆ ತಾಲ್ಲೂಕು ಪಂಚಾಯ್ತಿ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ವಿಶಾಲವಾದ ಸಭಾಂಗಣವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಸುಮಂಗಲಾ ರಾಮಕೃಷ್ಣ ಮಾತನಾಡಿ, ಕೇವಲ ಸುಸಜ್ಜಿತ ಸರ್ಕಾರಿ ಕಟ್ಟಡಗಳು ಇದ್ದ ಮಾತ್ರಕ್ಕೆ ಆಡಳಿತ ವ್ಯವಸ್ಥೆ ಸುಧಾರಿಸುವುದಿಲ್ಲ. ಅಧಿಕಾರಿಗಳು ಹಾಗೂ ನೌಕರರು ಚುರುಕಾಗಿ ತಮ್ಮ ಕರ್ತವ್ಯ ನಿಭಾಯಿಸಿದರೆ ನಿರ್ಜೀವ ಕಟ್ಟಡ ಜೀವ ಪಡೆದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಪ್ರಕಾಶ್ ಲ್ಯಾವಿಗೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯೆ ಲಲಿತಾ ನಾರಾಯಣ್, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಶ್ಯಾಮಲಾ ದೇವರಾಜ್, ಸದಸ್ಯರುಗಳಾದ ಮಹಾಬಲೇಶ್ವರ ಕುಗ್ವೆ, ಶ್ವೇತಾ ಉಮೇಶ್ ಕಾಗೋಡು, ಗಂಟೆ ಹರೀಶ್, ಸುಮಿತ್ರಮ್ಮ, ಕಾರ್ಯ ನಿರ್ವಹಣಾಧಿಕಾರಿ ಡಾ.ಶಶಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT