ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗೇರಿದ ಅಖಾಡ

ಎರಡು ಕ್ಷೇತ್ರಗಳಿಗೆ 8 ನಾಮಪತ್ರ ಸಲ್ಲಿಕೆ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಅಭ್ಯರ್ಥಿಗಳ ಉಮೇದುವಾರಿಕೆ
Last Updated 16 ಏಪ್ರಿಲ್ 2013, 12:27 IST
ಅಕ್ಷರ ಗಾತ್ರ

ಮಡಿಕೇರಿ: ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿ ಸೋಮವಾರ ಆರು ಅಭ್ಯರ್ಥಿಗಳು ನಾಮಪತ್ರಗಳು ಸಲ್ಲಿಸಿದ್ದಾರೆ.

ಮಡಿಕೇರಿ ಕ್ಷೇತ್ರ: ಬಿಜೆಪಿಯಿಂದ ಅಪ್ಪಚ್ಚು ರಂಜನ್, ಕಾಂಗ್ರೆಸ್ಸಿನಿಂದ ಕೆ.ಎಂ. ಲೋಕೇಶ್, ಜೆಡಿಎಸ್‌ನಿಂದ ಬಿ.ಎ. ಜೀವಿಜಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರಫೀಕ್ ಖಾನ್ ನಾಮಪತ್ರ ಸಲ್ಲಿಸಿದ್ದಾರೆ.

ವಿರಾಜಪೇಟೆ ಕ್ಷೇತ್ರ: ಬಿಜೆಪಿಯಿಂದ ಕೆ.ಜಿ. ಬೋಪಯ್ಯ ಹಾಗೂ ಕಾಂಗ್ರೆಸ್ಸಿನಿಂದ ಬಿ.ಟಿ. ಪ್ರದೀಪ್ ನಾಮಪತ್ರ ಸಲ್ಲಿಸಿದ್ದಾರೆ.

ಇದುವರೆಗೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 8 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 6 ಮಂದಿ ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. 

ಏಪ್ರಿಲ್ 18ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್, 20ರಂದು ನಾಮಪತ್ರ ವಾಪಸ್ಸು ತೆಗೆದುಕೊಳ್ಳುವ ದಿನವಾಗಿದೆ.

ಮೇ, 5ರಂದು ಮತದಾನವು ಬೆಳಗ್ಗೆ 7 ರಿಂದ ಸಂಜೆ 5ಗಂಟೆವರೆಗೆ ನಡೆಯಲಿದೆ. ಮೇ.8ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT