ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಾನದಿಂದ ಕಾಯಿಲೆ ದೂರ

Last Updated 18 ಅಕ್ಟೋಬರ್ 2012, 8:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಾರ್ವಜನಿಕರಲ್ಲಿ ರಕ್ತ ನೀಡುವ ಬಗ್ಗೆ ತಪ್ಪು ಕಲ್ಪನೆಯಿದೆ. ರಕ್ತದಾನ ಮಾಡಿದಂತೆಲ್ಲ ಹೊಸ ರಕ್ತ ಉತ್ಪತಿಯಾಗುತ್ತದೆ. ರಕ್ತದೊತ್ತಡ, ಮಧುಮೇಹ ಸೇರಿದಂತೆ ಅನೇಕ ರೋಗಗಳು ಸಹ ಹತ್ತಿರ ಸುಳಿಯುವುದಿಲ್ಲ ಎಂದು ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಮಂಜುನಾಥ್ ಗುಪ್ತಾ ಹೇಳಿದರು.

ತಾಲ್ಲೂಕಿನ ಕ್ಯಾದಿಗೆರೆ ಗ್ರಾಮದಲ್ಲಿ ಈಚೆಗೆ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದಲ್ಲಿ ಅವರು ಮಾತನಾಡಿದರು.ರಕ್ತದಾನ ಶ್ರೇಷ್ಠವಾಗಿದ್ದು, ಒಬ್ಬರ ರಕ್ತದಿಂದ 4 ಜನರ ಜೀವ ಉಳಿಸಬಹುದಾಗಿದೆ. ಆದ್ದರಿಂದ ಯುವಸಮೂಹ ರಕ್ತದಾನ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಉಪನ್ಯಾಸಕ ವಿ. ಚನ್ನಬಸಪ್ಪ ಮಾತನಾಡಿ, ದೇಶದ ಆರ್ಥಿಕ ಪ್ರಗತಿಯಾಗಲು ಮಹಿಳಾ ಸ್ವಸಹಾಯ ಸಂಸ್ಥೆಗಳು ಅತಿ ಅವಶ್ಯಕ. ಇತ್ತೀಚೆಗೆ ನಮ್ಮ ದೇಶದಲ್ಲಿ ಮಹಿಳಾ ಸಂಘಗಳು ಹೆಚ್ಚಾಗಿರುವುದರಿಂದ ದೇಶದ ಆರ್ಥಿಕ ಸ್ಥಿತಿ ಸುಧಾರಿಸಿದೆ ಎಂದು ತಿಳಿಸಿದರು.

ಶಿಕ್ಷಕ ದಾಸೇಗೌಡ ಮಾತನಾಡಿ, ಪ್ರಳಯದ ಭೀತಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ.  2012ರ ಪ್ರಳಯದ ಬಗ್ಗೆ ಜನತೆ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.ಪ್ರಾಂಶುಪಾಲ ಬಿ.ಆರ್. ನಾಗರಾಜ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಲಕ್ಷ್ಮೀಕಾಂತ್, ಡಾ.ಅನುಪಮಾ, ರಾಜ್‌ಕುಮಾರ್ ಹಾಜರಿದ್ದರು. ಆರ್. ಗಂಜಿಗಟ್ಟೆ ಕೃಷ್ಣಮೂರ್ತಿ ಮತ್ತು ಮಿನಾಕ್ಷಿ ಜಾನಪದ ಗೀತೆಗಳ ಮೂಲಕ ಜನತೆಗೆ ಮನರಂಜನೆ ನೀಡಿದರು. ವಿಜ್ಞಾನ ಶಿಕ್ಷಕ ಚಂದ್ರಣ್ಣ ಪವಾಡಗಳ ಗುಟ್ಟು ಮತ್ತು ಬಯಲು ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಯೋಜನಾಧಿಕಾರಿ ಎಸ್. ಹನುಮಂತಪ್ಪ ಕಾರ್ಯಕ್ರಮ ನಿರೂಪಿಸಿದರು.

  ಕಾನೂನು ನೆರವು
 ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಉಚಿತವಾಗಿ ಕಾನೂನು ನೆರವು ನೀಡಲಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸದಾಶಿವ ಸುಲ್ತಾನ್‌ಪುರಿ ತಿಳಿಸಿದರು.
ತಾಲ್ಲೂಕಿನ ಹುಲ್ಲೇಹಾಳ್ ಗ್ರಾಮದಲ್ಲಿ ಯಳಗೋಡು ಸರ್ಕಾರಿ ಪದವಿಪೂರ್ವ ಕಾಲೇಜು ಎನ್‌ಎಸ್‌ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರದಲ್ಲಿ ಅವರು ಮಾತನಾಡಿದರು. ಜಿ.ಎಚ್. ತಿಪ್ಪೇಸ್ವಾಮಿ,  ಪ್ರಾಂಶುಪಾಲ ಬಿ. ಸಣ್ಣಓಬಪ್ಪ, ಬಿ.ಟಿ. ಮಹಾಬಲೇಶ್ ಹಾಗೂ ಆರ್. ಉದಯ್‌ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT