ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಬಕವಿ ಬನಹಟ್ಟಿ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆ ಇಂದು

Last Updated 5 ಸೆಪ್ಟೆಂಬರ್ 2013, 7:25 IST
ಅಕ್ಷರ ಗಾತ್ರ

ಬನಹಟ್ಟಿ: ಜಿಲ್ಲೆಯ ಎರಡನೆಯ ಅತಿ ದೊಡ್ಡ ನಗರಗಳಾಗಿರುವ ರಬಕವಿ ಬನಹಟ್ಟಿಯ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಸೆ. 5 ರಂದು ಚುನಾವಣೆ ನಡೆಯಲಿದೆ ಎಂದು ನಗರಸಭೆಯ ಆಡಳಿತಾಧಿಕಾರಿ ಮತ್ತು ಚುನಾವಣಾ ಆಧಿಕಾರಿಯಾಗಿರುವ ಜಮಖಂಡಿಯ ಉಪವಿಭಾಗಾಧಿಕಾರಿ ಅಶೋಕ ದುಡಗುಂಟಿ ಪತ್ರಿಕೆಗೆ ದೂರವಾಣಿಯ ಮೂಲಕ ತಿಳಿಸಿದರು.

ಈ ಬಾರಿ ಅಧ್ಯಕ್ಷ ಸ್ಥಾನ ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನೀಡಲಾಗಿದೆ. ಈ ನಗರಸಭೆಯ ವ್ಯಾಪ್ತಿಯಲ್ಲಿ ರಬಕವಿ, ಬನಹಟ್ಟಿ, ಹೊಸೂರ ಮತ್ತು ರಾಮಪುರ ಸೇರಿದಂತೆ ಒಟ್ಟು 31 ಜನ ಸದಸ್ಯರು ಇದ್ದಾರೆ ಮತ್ತು ಬಾಗಲಕೋಟೆಯ ಸಂಸದ ಪಿ.ಸಿ. ಗದ್ದಿಗೌಡರ ಮತ್ತು ತೇರದಾಳ ಮತಕ್ಷೇತ್ರದ ಶಾಸಕಿ ಉಮಾಶ್ರೀ ಮತದಾನ ಮಾಡುವ ಹಕ್ಕನ್ನು ಪಡೆದುಕೊಂಡಿದ್ದಾರೆ.

ಬೆಳಗ್ಗೆ 9ರಿಂದ 10 ಗಂಟೆಯವರೆಗೆ ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿ ಮಾಡಿದ್ದು ನಂತರ ಮಧ್ಯಾಹ್ನ 12ಕ್ಕೆ ಸಭೆಯನ್ನು ಕರೆಯಲಾಗುವುದು. ಈ ಸಂದರ್ಭದಲ್ಲಿ ಸ್ವೀಕೃತವಾದ ನಾಮಪತ್ರಗಳನ್ನು ಪರಿಶೀಲನೆ ಮಾಡಲಾಗುವುದು. ನಂತರ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡಲಾಗುವುದು. ಮೊದಲು ಅಧ್ಯಕ್ಷರ ಸ್ಥಾನಕ್ಕೆ ನಂತರ ಉಪಾಧ್ಯಕ್ಷರ ಸ್ಥಾನಕ್ಕೆ  ಚುನಾವಣೆ ನಡೆಸಲಾಗುವುದು ಎಂದು ಉಪವಿಭಾಗಾಧಿಕಾರಿ ದುಡಗುಂಟಿ ತಿಳಿಸಿದರು.

ಕುತೂಹಲಕಾರಿ ಚುನಾವಣೆ:  ಒಟ್ಟು 31 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಇದರಲ್ಲಿ 17 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದರೆ 13 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯವನ್ನು ಸಾಧಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯ ಪಡೆದಿದ್ದಾರೆ. ಮೇಲ್ನೋಟಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ.

ಆದರೆ ಒಂದು ವಾರದಿಂದ ಕಾಂಗ್ರೆಸ್ ಪಕ್ಷದ ಯಾವುದೆ ಸದಸ್ಯ ನಗರದಲ್ಲಿ ಇಲ್ಲ. ಇವರೆಲ್ಲರನ್ನು ಅಜ್ಞಾತ ಸ್ಥಳದಲ್ಲಿ ಇಡಲಾಗಿದೆ ಎಂಬುದು ತಿಳಿದು ಬಂದಿದೆ. ಈ ಎಲ್ಲ ಸದಸ್ಯರನ್ನು ಮಧ್ಯಾಹ್ನ ನಡೆಯುವ ಸಭೆಗೆ ನೇರವಾಗಿ ಕರೆದುಕೊಂಡು ಬರಬಹುದು. ಬಿಜೆಪಿ ಪಕ್ಷ ಪಕ್ಷೇತರ ಸದಸ್ಯನ ಬೆಂಬಲವನ್ನು ಪಡೆದುಕೊಂಡಿದೆ. ಒಟ್ಟಿನಲ್ಲಿ ಗುರುವಾರ ನಡೆಯುವ ಈ ಚುನಾವಣೆ ಅತ್ಯಂತ ಮಹತ್ವದ ಸಂಗತಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT