ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Last Updated 1 ಜನವರಿ 2012, 19:50 IST
ಅಕ್ಷರ ಗಾತ್ರ

ಯಲಹಂಕ: ಶಾಸಕರ ಪ್ರದೇಶಾಭಿವೃದ್ಧಿ ಹಾಗೂ ವಿಧಾನ ಪರಿಷತ್ ಸದಸ್ಯರ ಅನುದಾನದಡಿಯಲ್ಲಿ ರಜಾಕ್‌ಸಾಬ್ ಪಾಳ್ಯದಲ್ಲಿ ಕೈಗೆತ್ತಿಕೊಂಡಿರುವ 20 ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ಮಾರನಾಯಕನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಡಿಯಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಓವರ್‌ಹೆಡ್ ಟ್ಯಾಂಕ್ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ಹಾಗೂ ವಿಧಾನ ಪರಿಷತ್ ಸದಸ್ಯರ ಅನುದಾನದಡಿಯಲ್ಲಿ ಹರಿಜನ ಕಾಲೋನಿಯಲ್ಲಿ ರೂಪಾಯಿ 20 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.

ವಿಧಾನ ಪರಿಷತ್ ಸದಸ್ಯ ದಯಾನಂದರೆಡ್ಡಿ, ಜಿ.ಪಂ.ಸದಸ್ಯರಾದ ಕೆ.ಅಶೋಕನ್, ದಾನೇಗೌಡ, ಶುಭಾ ನರಸಿಂಹಮೂರ್ತಿ, ತಾ.ಪಂ.ಸದಸ್ಯ ಲೋಕೇಶ್, ಗ್ರಾ.ಪಂ.ಅಧ್ಯಕ್ಷ ವೆಂಕಟೇಶ್, ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸಯ್ಯ, ಎಪಿಎಂಸಿ ನಿರ್ದೇಶಕ ಶಿವಣ್ಣ ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT