ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುರಸ್ತಿಗೆ ಆಗ್ರಹಿಸಿ ಹುಕ್ಕೇರಿ ಧರಣಿ

Last Updated 3 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಧೋಳ- ನಿಪ್ಪಾಣಿ ನಡುವಿನ 108 ಕಿ.ಮೀ ರಾಜ್ಯ ಹೆದ್ದಾರಿ ತೀವ್ರ ಹದಗೆಟ್ಟಿದ್ದು, ದುರಸ್ತಿಗೆ ಒತ್ತಾಯಿಸಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ವಿಧಾನಸಭೆಯಲ್ಲಿ ಶುಕ್ರವಾರ ಧರಣಿ ನಡೆಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಈ ರಸ್ತೆ ಅಭಿವೃದ್ಧಿ ಕುರಿತು ವಿಷಯ ಪ್ರಸ್ತಾಪಿಸಿದರು. ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ಇದಕ್ಕೆ ಉತ್ತರ ನೀಡಿ, ಎಡಿಬಿ ಅಥವಾ ವಿಶ್ವಬ್ಯಾಂಕ್ ನೆರವಿನೊಂದಿಗೆ ಈ ಯೋಜನೆಕೈಗೆತ್ತಿಕೊಳ್ಳಲಾಗುವುದು.  ಡಿಸೆಂಬರ್‌ಗೆ ಕಾಮಗಾರಿ ಆರಂಭವಾಗಲಿದೆ ಎಂದರು.

`ಈಗಲೇ ಓಡಾಡಲು ಸಾಧ್ಯ ಇಲ್ಲದ ರಸ್ತೆಯಲ್ಲಿ ಡಿಸೆಂಬರ್‌ವರೆಗೆ ಹೇಗೆ ಓಡಾಡುವುದು? ಸಚಿವರ ಉತ್ತರ ಸರಿ ಇಲ್ಲ~ ಎಂದು ಅವರು ಆಕ್ಷೇಪಿಸಿದರು. ನಂತರ ಸ್ಪೀಕರ್ ಪೀಠದ ಮುಂದೆ ತೆರಳಿ ಧರಣಿ ನಡೆಸಿದರು.

ದುರಸ್ತಿ ಮಾಡುವ ಆಶ್ವಾಸನೆ ನೀಡುವವರೆಗೂ ಧರಣಿ ಕೈಬಿಡುವುದಿಲ್ಲ ಎಂದರು. ಆಗ ಉದಾಸಿ `ತಕ್ಷಣಕ್ಕೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುವುದು~ ಎಂದು ಹೇಳಿದರು. ಹುಕ್ಕೇರಿ ಧರಣಿ ಕೈಬಿಟ್ಟರು.

ರೈತರಿಗೆ ಸಿಗದ ಪವರ್ ಟಿಲ್ಲರ್: ಪವರ್ ಟಿಲ್ಲರ್ ಮತ್ತು ಇತರ ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ಸಹಾಯಧನ ನೀಡುವುದು ಬಾಕಿ ಇದ್ದು, ಮಾರ್ಚ್ ಒಳಗೆ ಎಲ್ಲವನ್ನೂ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಉಮೇಶ ಕತ್ತಿ ವಿಧಾನಸಭೆಗೆ ತಿಳಿಸಿದರು. ಜೆಡಿಎಸ್‌ನ ವೆಂಕಟರಾವ್ ನಾಡಗೌಡರ ಪ್ರಶ್ನೆಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT