ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಬದಿ ವ್ಯಾಪಾರಿಗಳಿಗೆ: ಪರ್ಯಾಯ ವ್ಯವಸ್ಥೆಗೆ ಕ್ರಮ

Last Updated 3 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಗಾಂಧಿ ಬಜಾರ್ ರಸ್ತೆ ಬದಿಯ ವ್ಯಾಪಾರಿಗಳನ್ನು ತೆರವುಗೊಳಿಸಿದ್ದು, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಶುಕ್ರವಾರ ಭರವಸೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ದಿಢೀರನೆ ತೆರವು ಕಾರ್ಯಾಚರಣೆ ನಡೆಸಿರುವುದರಿಂದ ರಸ್ತೆಬದಿ ವ್ಯಾಪಾರಿಗಳು ಸಮಸ್ಯೆಗೆ ಸಿಲುಕಿದ್ದು, ಸರ್ಕಾರ ಅವರ ರಕ್ಷಣಗೆ ಧಾವಿಸಬೇಕು ಎಂದು ಕಾಂಗ್ರೆಸ್ ಸದಸ್ಯ    ಆರ್.ವಿ.ವೆಂಕಟೇಶ್ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಮುಖ್ಯಮಂತ್ರಿಯವರು, ರಸ್ತೆಬದಿಯ ವ್ಯಾಪಾರಿಗಳಿಂದ ಸಂಚಾರ ದಟ್ಟಣೆ, ವಾಹನ ನಿಲುಗಡೆ ತಾಣಗಳ ಅತಿಕ್ರಮಣದಂತಹ ಸಮಸ್ಯೆಗಳಿದ್ದವು. ಅದನ್ನು ನಿವಾರಿಸುವುದಕ್ಕಾಗಿಯೇ  ಕಾರ್ಯಾಚರಣೆ ನಡೆಸಿದೆ ಎಂದರು.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳಿಂದಲೂ ಈ ಸಂಬಂಧ ಸ್ಪಷ್ಟವಾದ ಆದೇಶವಿತ್ತು. ರಸ್ತೆಬದಿಯ ವ್ಯಾಪಾರಿಗಳನ್ನು ತೆರವುಗೊಳಿಸಿ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ನ್ಯಾಯಾಲಯಗಳಿಂದ ನಿರ್ದೇಶನ ಇದೆ. ಅದರಂತೆ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇದರಿಂದ ಒಳಗಾಗಿರುವ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT