ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ

Last Updated 30 ಅಕ್ಟೋಬರ್ 2011, 9:45 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ರೂ. 265 ಲಕ್ಷ ಅನುದಾನ ಒದಗಿಸುವ ಮೂಲಕ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದೆ ಎಂದು ಕ್ಷೇತ್ರದ ಶಾಸಕರಾದ ನೇಮರಾಜ್‌ನಾಯ್ಕ ತಿಳಿಸಿದರು.

ಪಟ್ಟಣದ ಬಸವೇಶ್ವರ ಬಜಾರ್‌ನಲ್ಲಿ ಶನಿವಾರ ಹೊಸಪೇಟೆ ಶಿವಮೊಗ್ಗ ರಾಜ್ಯ ಹೆದ್ದಾರಿಯ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಮೂರು ದಶಕಗಳ ಜನತೆಯ ಬೇಡಿಕೆಯಾಗಿದ್ದ ರಸ್ತೆ ಅಗಲೀಕರಣಕ್ಕೆ ಸರಕಾರ ಸ್ಪಂದಿಸಿದ್ದು, ಮೊದಲ ಹಂತದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಬೈಪಾಸ್‌ವರೆಗೆ 2 ಮೀಟರ್ ಅಗಲದ ಫುಟ್‌ಪಾತ್ ಸೇರಿದಂತೆ 3 ಅಡಿಯಷ್ಟು ಚರಂಡಿ ನಿರ್ಮಿಸಿ ಹೈಮಾಸ್ ದೀಪ ಅಳವಡಿಸಲಾಗುತ್ತದೆ ಎಂದು ವಿವರಿಸಿದರು.

ಕಳೆದ ಮೂರು ವರ್ಷಗಳ ಹಿಂದೆ ರಸ್ತೆ ವಿಸ್ತರಣೆಗೆ ಉದ್ದೇಶಿಸಲಾಗಿದ್ದರೂ, ಅನುದಾನ ಲಭ್ಯವಾಗದ ಕಾರಣ ರಸ್ತೆ ವಿಸ್ತರಣೆ ನೆನೆಗುದಿಗೆ ಬಿದ್ದಿತ್ತು. ಇದೀಗ ಅನುದಾನ ಒದಗಿಸಿ ಟೆಂಡರ್ ಪ್ರಕ್ರಿಯೆ ಪೂರೈಸಿ ಕಾಮಗಾರಿ ಕೈಗೆತ್ತಿಕೊಳ್ಳುವ ಮೂಲಕ ರಸ್ತೆ ಅಗಲೀಕಣ ಕುರಿತಂತೆ ಇದ್ದ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ ಎಂದರು.

ರಸ್ತೆ ವಿಸ್ತರಣೆ ಪ್ರಕ್ರಿಯೆಯಲ್ಲಿ ಹಳೇ ಹಗರಿಬೊಮ್ಮನಹಳ್ಳಿ ಬಸವೇಶ್ವರ ಬಜಾರ್ ಎಂದು ತಾರತಮ್ಯ ಮಾಡದೆ ಸಮಾನ ಸೂತ್ರ ಅಳವಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಹಾದು ಹೋಗಿರುವ ಪ್ರಮುಖ ರಾಜ್ಯ ಹೆದ್ದಾರಿಗಳ ವಿಸ್ತರಿಸಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಎರಡನೇ ಹಂತದಲ್ಲಿ ಹಳೇ ಹಗರಿಬೊಮ್ಮನಹಳ್ಳಿಯಿಂದ ಗಾಳೆಮ್ಮನಗುಡಿವರೆಗೆ ರಸ್ತೆ ವಿಸ್ತರಣೆಗೆ ರೂ.2.5ಕೋಟಿ ಮೊತ್ತದ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರ ಅನುದಾನ ಒದಗಿಸಿ ಭೂಮಿಪೂಜೆ ನೆರವೇರಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಬಳಿಕ ಕೂಡ್ಲಿಗಿ ಸರ್ಕಲ್ ಬಳಿ ರೂ.175ಲಕ್ಷ ಮೊತ್ತದ 3.85ಕಿಮೀ ಆಯ್ದ ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದರು. ಜಿ.ಪಂ.ಸದಸ್ಯರಾದ ರೋಗಾಣಿ ಹುಲುಗಪ್ಪ, ರತ್ನಮ್ಮ ಸಿದ್ಧಲಿಂಗನಗೌಡ, ಹೇಮ್ಲಮ್ಮ ಕೃಷ್ಣಾನಾಯ್ಕ, ತಾ.ಪಂ. ಅಧ್ಯಕ್ಷೆ ಬಿ.ಗಂಗಮ್ಮ ಪವಾಡಿ ಹನಮಂತಪ್ಪ, ಇಓ ಜೆ.ಗೋಪ್ಯಾನಾಯ್ಕ, ಉಪಾಧ್ಯಕ್ಷೆ ಭಾರತಿ ಶಿವಕುಮಾರ್ ಬೆಲ್ಲದ್, ಸದಸ್ಯರಾದ ಉಪ್ಪಾರ ಬಾಳಪ್ಪ, ಕುರುಬರ ನಾಗರತ್ನಮ್ಮ, ಚಿಂತ್ರಪಳ್ಳಿ ಗ್ರಾ.ಪಂ.ಅಧ್ಯಕ್ಷೆ ಸಾಕಮ್ಮ ರಾಮಣ್ಣ, ಉಪಾಧ್ಯಕ್ಷ ಟಿ.ಕಾಶೀಂಸಾಹೇಬ್, ಲೋಕೋಪಯೋಗಿ ಎಇಇ ಮಲ್ಲಿಕಾರ್ಜುನ ಕುಷ್ಟಗಿ ಮತ್ತಿತರರು ಉಪಸ್ಥಿತರಿದ್ದರು 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT