ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಸರಿಪಡಿಸದಿದ್ದರೆ ಚುನಾವಣೆ ಬಹಿಷ್ಕಾರ: ಎಚ್ಚರಿಕೆ

Last Updated 4 ಏಪ್ರಿಲ್ 2013, 6:21 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ವೆಸ್ಟ್ ಕೊಳಕೇರಿ ಗ್ರಾಮದಲ್ಲಿ ಸರಿಯಾದ ರಸ್ತೆ ನಿರ್ಮಿಸದ ಸರ್ಕಾರದ ವಿರುದ್ಧ ಮಂಗಳವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕೊಳಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 3.5 ಕಿ.ಮೀ. ರಸ್ತೆಯನ್ನು ದುರಸ್ತಿಪಡಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಹೊಸ ರಸ್ತೆ ನಿರ್ಮಾಣಕ್ಕೆ ಗ್ರಾಮ ಸಡಕ್ ಯೋಜನೆಯಡಿ ರೂ.1.84 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಲಾಗಿದ್ದರೂ ಇನ್ನೂ ರಸ್ತೆ ನಿರ್ಮಾಣವಾಗಿಲ್ಲ. ರಸ್ತೆಯು ಜನಸಂಚಾರ ಅಸಾಧ್ಯವೆನ್ನುವಷ್ಟು ಹದಗೆಟ್ಟಿದೆ ಎಂದು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕಾಯಂಡ ಸುಬ್ಬಯ್ಯ, ಮಾಜಿ ಅಧ್ಯಕ್ಷ ಕುಂಡ್ಯೋಳಂಡ ಮಾದಪ್ಪ, ಕಲಿಯಂಡ ಹ್ಯಾರಿ ಮಂದಣ್ಣ. ಕಲ್ಲಂದೀರ ಬೆಳ್ಯಪ್ಪ, ಕುಂಡ್ಯೋಳಂಡ ಮುದ್ದಪ್ಪ, ವಿಶುಪೂವಯ್ಯ, ಕೆ.ಎ. ತಮ್ಮಯ್ಯ, ಕಲಿಯಂಡ ವಿಠಲ ಮುದ್ದಯ್ಯ, ಕುಂಡ್ಯೋಳಂಡ ಗಣೇಶ್ ಮುತ್ತಪ್ಪ ದೂರಿದರು.

ಸೂಕ್ತ ರಸ್ತೆ ನಿರ್ಮಾಣ ಮಾಡದಿದ್ದರೆ ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವುದಲ್ಲದೇ ಗ್ರಾಮ ವ್ಯಾಪ್ತಿಯಲ್ಲಿ ಮತಗಟ್ಟೆ ತೆರೆಯಲೂ ಅವಕಾಶ ಕಲ್ಪಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT