ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ರಾಜಕಾರಣ ನಿರಂತರ ಸುಲಿಗೆ ಮಾಧ್ಯಮ'

Last Updated 17 ಏಪ್ರಿಲ್ 2013, 11:02 IST
ಅಕ್ಷರ ಗಾತ್ರ

ಹಾಸನ: `ರಾಜಕಾರಣ ಎಂಬುದು ನಿರಂತರವಾಗಿ ಸುಲಿಗೆ ಮಾಡುತ್ತಿರುವ ಒಂದು ಮಾಧ್ಯಮ' ಎಂದು ಸಾಹಿತಿ ಜ.ಹೋ. ನಾರಾಯಣಸ್ವಾಮಿ ನುಡಿದರು.

ತಾಲ್ಲೂಕಿನ ಗೊರೂರು ಎ.ಎನ್. ವಿ. ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, `ಸ್ವಾರ್ಥ ರಾಜಕೀಯದಿಂದಾಗಿ ಸಾಮಾಜಿಕ ವ್ಯವಸ್ಥೆ ಹದಗೆಡುತ್ತಿದೆ.

ರಾಜಕೀಯ ಕ್ಷೇತ್ರಕ್ಕೆ ಅಂಟಿಕೊಳ್ಳುತ್ತಿರುವ ಯುವಕರು ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು' ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ.ಆರ್. ಚಂದ್ರಶೇಖರ್ `ರಾಜ ಕೀಯ ಕ್ಷೇತ್ರದ ಮೂಲಕ ಯುವಕರು ಸಾಮಾಜ ಕಾರ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು' ಎಂದು ತಿಳಿಸಿದರು.

ಮಂಗಳಗಂಗೋತ್ರಿಯ ಸ್ನಾತಕೋ ತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಪಿ.ಎಲ್.ಧರ್ಮ, ಎ.ಎನ್.ವಿ.ವಿದ್ಯಾಸಂಸ್ಥೆಯ ಕಾರ್ಯ ದರ್ಶಿ ಎ.ಜೆ.ರಾಮನಾಥ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ  ಎಚ್.ಡಿ. ಲೋಕೇಶ್, ಉಪನ್ಯಾಸಕರಾದ ಜಯಲಕ್ಷ್ಮಿ , ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT