ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಕುಲಗೆಟ್ಟಿದೆ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:`ರಾಜನೀತಿ ಇಂದು ಕುಲಗೆಟ್ಟು ಹೋಗಿದೆ. ಇದನ್ನು ಸರಿದಾರಿಗೆ ತರುವ ಕಾರ್ಯ ತುರ್ತಾಗಿ ನಡೆಯಬೇಕಿದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ನಗರದ ಪುರಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.

`ಅಧಿಕಾರದಲ್ಲಿರುವವರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವುದು ನಡೆದೇ ಇದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಹೊಣೆಗಾರಿಕೆ ಮರೆತು ಕಾಲಹರಣ ಮಾಡುವುದು ಕೂಡ ನಡೆಯುತ್ತಲೇ ಇದೆ~ ಎಂದು ನುಡಿದರು.

`ವಿರೋಧ ಪಕ್ಷಗಳು ರಚನಾತ್ಮಕ ಟೀಕೆ ಮಾಡಬೇಕು. ಕೇವಲ ಟೀಕೆ ಮಾಡುವುದೇ ಕೆಲಸವಾಗಬಾರದು. ಒಟ್ಟಿನಲ್ಲಿ ಹದಗೆಟ್ಟಿರುವ ರಾಜಕಾರಣ ಸರಿಪಡಿಸಬೇಕಿದೆ~ ಎಂದರು.

`ಮೂರು ವರ್ಷಗಳ ಆಡಳಿತಾವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 187 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆ ಮೂಲಕ 1.24 ಲಕ್ಷ ಮಂದಿ ಅರ್ಹ ಫಲಾನುಭವಿಗಳಿಗೆ ವಿವಿಧ ಸಲವತ್ತುಗಳನ್ನು ಒದಗಿಸಲಾಗಿದೆ~ ಎಂದು ಹೇಳಿದರು.

`ಕ್ರೈಸ್ತರಿಗೆ ವಿವಿಧ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 50 ಕೋಟಿ ರೂಪಾಯಿ ಪ್ರತ್ಯೇಕ ಅನುದಾನ ನೀಡಲಾಗಿದೆ. ಈ ಅನುದಾನದ ಸಮರ್ಪಕ ಬಳಕೆಗೆ ಮೂರು ದಿನಗಳಲ್ಲಿ ಸಮಿತಿಗರಚಿಸಲಾಗುವುದು. ಹಾಗೆಯೇ ಹಜ್ ಯಾತ್ರೆಗೆ ಹೆಚ್ಚಿನ ಅನುದಾನ ನೀಡಲು ಚಿಂತಿಸಲಾಗುವುದು~ ಎಂದರು.

ನಿಗಮದ ಅಧ್ಯಕ್ಷ ಎನ್.ಬಿ. ಅಬೂಬಕರ್, `ಅಲ್ಪಸಂಖ್ಯಾತರು ನಿವೇಶನ ಖರೀದಿಸಲು ಹಾಗೂ ಮನೆ ನಿರ್ಮಿಸಲು  ಮೂರು ಲಕ್ಷ ರೂಪಾಯಿವರೆಗೆ ಸಾಲ ನೀಡುವ ಸೌಲಭ್ಯ ಕಲ್ಪಿಸಬೇಕು~ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಅಬ್ದುಲ್ ಅಜೀಂ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ (ಅಲ್ಪಸಂಖ್ಯಾತರ ಕಲ್ಯಾಣ) ಸೈಯದ್ ಜಮೀರ್ ಪಾಷಾ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 
ಜೆಡಿಎಸ್ ಶಾಸಕರ ಮೆಚ್ಚುಗೆ
:`ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ನೀಡಿದೆ~ ಎಂದು ವಿಧಾನ ಪರಿಷತ್ ಸದಸ್ಯ ಜೆಡಿಎಸ್‌ನ ಅಬ್ದುಲ್ ಅಜೀಂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT