ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಧ್ರುವೀಕರಣಕ್ಕೆ ಸಕಾಲ

Last Updated 1 ಅಕ್ಟೋಬರ್ 2011, 19:45 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯದಲ್ಲಿ ರಾಜಕೀಯ ಧ್ರುವೀಕರಣಕ್ಕೆ ಕಾಲ ಪಕ್ವವಾಗಿದ್ದು, ಜನತಾ ಪರಿವಾರವನ್ನು ಒಗ್ಗೂಡಿಸುವ ಪ್ರಾಮಾಣಿಕ ಪ್ರಯತ್ನ ನಡೆಯಬೇಕಿದೆ~ ಎಂದು ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ಹೇಳಿದರು.

ಮಾನವಧರ್ಮ ಅಂತರರಾಷ್ಟ್ರೀಯ ಪ್ರತಿಷ್ಠಾನ ಕೇಂದ್ರವು ನಗರದ ನಯನ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜೆ.ಎಚ್. ಪಟೇಲ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಪಿ. ನಾಡಗೌಡ, `ಇಂದಿನ ರಾಜಕೀಯ ಪರಿಸ್ಥಿತಿ ಸೂಕ್ಷ್ಮವಾಗಿ ಗಮನಿಸುವವರು ಹಾಗೂ ಸಾಮಾನ್ಯ ಜನತೆ ಜೆ.ಎಚ್.ಪಟೇಲ್, ರಾಮಕೃಷ್ಣ ಹೆಗ್ಡೆ ಅಂತವರ ಸರ್ಕಾರ ಇರಬೇಕಿತ್ತು ಎಂದು ಸ್ಮರಿಸುವುದು  ಕಂಡಾಗ ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ~ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ,  `ಕಾಂಗ್ರೆಸ್ ಪಕ್ಷ ನೆಹರು ಪರಿವಾರವಾದರೆ, ಬಿಜೆಪಿ ಸಂಘ ಪರಿವಾರ. ಜೆಡಿಎಸ್ ಗೌಡರ ಪರಿವಾರ. ಈ ಪರಿವಾರಗಳನ್ನು ಮೀರಿದ ರಾಜಕೀಯ ಧ್ರುವೀಕರಣ ನಡೆಯಬೇಕಿದೆ~ ಎಂದರು.

ಅರ್ಜುನ ಪ್ರಶಸ್ತಿ ಪುರಸ್ಕೃತೆ ತೇಜಸ್ವಿನಿ ಬಾಯಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಣ ತಜ್ಞ ಪ್ರೊ.ಕೆ.ಈ. ರಾಧಾಕೃಷ್ಣ, ಕೇಂದ್ರದ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಪ್ರಧಾನ ಕಾರ್ಯದರ್ಶಿ ಪಿ.ವಿಜಯಕುಮಾರ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT