ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಲಾಭಕ್ಕಾಗಿ ಸುಳ್ಳು ವದಂತಿ:ಹೆಗ್ಡೆ

Last Updated 8 ಏಪ್ರಿಲ್ 2014, 9:41 IST
ಅಕ್ಷರ ಗಾತ್ರ

ತರೀಕೆರೆ: ಬಿಜೆಪಿ ರಾಜಕೀಯ ಲಾಭಕ್ಕಾಗಿ ಅಡಿಕೆ ನಿಷೇಧದ ಸುಳ್ಳು ವದಂತಿ ಹಬ್ಬಿಸುತ್ತಿದೆ ಎಂದು ಉಡುಪಿ–ಚಿಕ್ಕಮ ಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ತರೀಕೆರೆ ಸಮೀಪದ ಅಮೃತಾಪುರ ಹೋಬಳಿಯ, ಕುಂಟಿನಮಡು, ನಾಗೇ ನಹಳ್ಳಿ ಹಾದಿಕೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಅಡಿಕೆ ನಿಷೇಧದ ಪ್ರಸ್ತಾವನೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮುಂದೆ ಇಲ್ಲ. ಅಡಿಕೆ ಜೊತೆ ತಂಬಾಕು ಹಾಗೂ ನಿಕೋಟಿನ್ ಯುಕ್ತ ವಸ್ತುಗಳು ಹಾನಿಕರ ಎಂಬುದನ್ನು ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ತಿಳಿಸಿದ್ದು, ಯಾವ ಕಾರಣಕ್ಕೂ ಅಡಿಕೆ ನಿಷೇಧ ಮಾಡಲಾಗುವುದಿಲ್ಲ. ಬಿಜೆಪಿ ಈ ವಿಚಾರದಲ್ಲಿ  ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದರು.

ಅಮೃತಾಪುರದ ಐತಿಹಾಸಿಕ ದೇವ ಸ್ಥಾನವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಿ ಪ್ರವಾಸಿಗರಿಗೆ ಮೂಲ ಸೌಕರ್ಯ ಒದಗಿಸಲು ಈಗಾಗಲೇ ಕ್ರಮ ಕೈಗೊಂಡು ಹಣ ಸಹಾ ಮಂಜೂ ರಾಗಿದ್ದು, ಪ್ರವಾಸೋದ್ಯಮದ ಜೊತೆಗೆ ಉದ್ಯೋಗ ಸೃಷ್ಟಿ ಮಾಡಲು ಅಮೃತೋತ್ಸವ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪ್ರವಾಸಿ ಗರನ್ನು ಆಕರ್ಷಿಸಲು ಚಿಂತನೆ ನಡೆದಿದೆ ಎಂದರು.

ಶಾಸಕ ಜಿ.ಎಚ್. ಶ್ರೀನಿವಾಸ್ ಮಾತ ನಾಡಿ, ಅಡಿಕೆ ಬೆಳೆಗಾರರೇ ಹೆಚ್ಚಿರುವ ಅಮೃತಾಪುರ ಹೋಬಳಿಯಲ್ಲಿ ಜಾತ್ಯತೀತವಾಗಿ ಅಭಿವೃದ್ಧಿ ಕೆಲಸ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ನೆರವಿನಿಂದ ರಸ್ತೆ ಅಭಿವೃದ್ಧಿ, ಅಂತರ್ಜಲ ಅಭಿವೃದ್ಧಿ ಕಾರ್ಯ ಕ್ರಮಗಳು, ನೀರಿನ ಸಮಸ್ಯೆ ನೀಗಿಸಲು ಚೆಕ್ ಡ್ಯಾಂ ನಿರ್ಮಾಣ ಹಲವು ಯೋಜನೆ ರೂಪಿಸಿ ಅನುಷ್ಠಾನ ಗೊಳಿಸಲಾಗಿದ್ದು, ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಸ್.ಎಂ.ನಾಗರಾಜ್, ಪಕ್ಷದ ಮುಖಂಡರಾದ ಧ್ರುವಕುಮಾರ್, ದೋರನಾಳ್ ಪರಮೇಶ್, ಕೆ.ಪಿ. ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ, ಪುರಸಭೆಯ ಅಧ್ಯಕ್ಷರು ಮತ್ತು ಸದಸ್ಯರು ಇನ್ನಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT