ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯದಲ್ಲಿ ಬದ್ಧತೆ ಅಗತ್ಯ: ಖರ್ಗೆ

Last Updated 5 ಫೆಬ್ರುವರಿ 2011, 19:10 IST
ಅಕ್ಷರ ಗಾತ್ರ

ಗುಲ್ಬರ್ಗ: ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಜತೆಗೆ ಅಂತರರಾಷ್ಟ್ರೀಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮುಕ್ತ ಚರ್ಚೆ ನಡೆಸುವ ಮೂಲಕ ಸಾಮಾಜಿಕ, ಆರ್ಥಿಕ ವ್ಯವಸ್ಥೆಯಿಂದ ಉಂಟಾಗುವ ರಾಜಕೀಯ ಪ್ರಭಾವವನ್ನು ಗುರುತಿಸಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮಲ್ಲಿಕಾರ್ಜುನ ಖರ್ಗೆ ನುಡಿದರು.

ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಸಿದ್ಧಾರ್ಥ ವಿಹಾರ ಟ್ರಸ್ಟ್ ಆಶ್ರಯದಲ್ಲಿ ಶನಿವಾರ ಗುಲ್ಬರ್ಗ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಶಾಸ್ತ್ರ ಉಪನ್ಯಾಸಕರ 12ನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಬದಲಾವಣೆಗೆ ರಾಜಕೀಯ ಶಕ್ತಿ ಅನಿವಾರ್ಯವಾಗಿದ್ದು ರಾಜಕೀಯವು ಬದ್ಧತೆ ಇದ್ದ ವ್ಯಕ್ತಿಗಳ ಕೈಯಲ್ಲಿ ಸಿಕ್ಕಾಗ ಮಾತ್ರ ಸಮಾಜದ ಉನ್ನತಿ, ಅಬಿವೃದ್ಧಿ ಸಾಧ್ಯ. ಮುಂದಿನ ಪೀಳಿಗೆಗೆ ವೈಜ್ಞಾನಿಕ ಮತ್ತು ಶಾಸ್ತ್ರೀಯ ದೃಷ್ಟಿಕೋನ ಬೆಳೆಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

 ರಾಜಕೀಯ ಶಕ್ತಿ ಉತ್ತಮ ವ್ಯಕ್ತಿಯ ಕೈಗೆ ಸಿಕ್ಕಾಗ ಮಾತ್ರ ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ, ಮೂಢನಂಬಿಕೆ, ಕಂದಾಚಾರ ನಿರ್ಮೂಲನೆ ಆಗಲು ಸಾಧ್ಯ. ಶಿಕ್ಷಕರಾದವರು ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಜೈನ್ ವಿಶ್ವವಿದ್ಯಾಲಯದ ಪ್ರೊ. ಸಂದೀಪ ಶಾಸ್ತ್ರಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕುಲಸಚಿವ ಪ್ರೊ. ಎಸ್.ಎಲ್.ಹಿರೇಮಠ, ಪ್ರೊ. ಬಿ.ಎಂ. ಬೈಯಿನ್, ಪ್ರೊ. ವೀರಭದ್ರಯ್ಯ, ಪ್ರೊ. ಮುರಲೀಧರಯ್ಯ ಇದ್ದರು. ಎಸ್.ಎ. ಪಾಳೇಕರ್ ಸ್ವಾಗತಿಸಿದರು. ಪ್ರೊ. ಚಂದ್ರಕಾಂತ ಯಾತನೂರ ನಿರೂಪಿಸಿದರು.      
  
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT