ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ಕೊಡೊಲ್ಲ: ಈಶ್ವರಪ್ಪ

Last Updated 19 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನನ್ನ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಆದರೆ ಅದಕ್ಕಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ' ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬುಧವಾರ ಇಲ್ಲಿ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಅವರು ಮಾತನಾಡಿದರು.

`ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿರುವ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಗೂ ಮುನ್ನ ಮೊಕದ್ದಮೆ ದಾಖಲಿಸಿದ್ದಾರೆ. ಸತ್ಯ ಏನು ಎನ್ನುವುದನ್ನು ಅರಿಯದ ಪ್ರತಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸುವುದರಲ್ಲಿ ಅರ್ಥ ಇಲ್ಲ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT