ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ಪ್ರಶ್ನೆಯೇ ಇಲ್ಲ – ನ್ಯಾ.ಗಂಗೂಲಿ

ಯುವ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
Last Updated 10 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯ­ಮೂರ್ತಿ ಎ.ಕೆ. ಗಂಗೂಲಿ, ತಾವು ‘ಪಶ್ಚಿಮ ಬಂಗಾಳ ಮಾನವ ಹಕ್ಕು­ಗಳ ಆಯೋಗ’ದ (ಡಬ್ಲ್ಯೂಬಿ­ಎಚ್‌­ಆರ್‌ಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀ­ನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾನವ ಹಕ್ಕು ಆಯೋಗ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ,  ‘ಇಲ್ಲ, ಕೊಡುವುದಿಲ್ಲ’ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಅಲ್ಲದೇ, ‘ನಿಮ್ಮ ಯಾವುದೇ ಪ್ರಶ್ನೆಗಳಿಗೆ ನಾನು ಉತ್ತರಿಸು­ವುದಿಲ್ಲ. ನನಗೆ ಇಷ್ಟಬಂದಂತೆ ನಾನು ಮಾಡು­ತ್ತೇನೆ’ ಎಂದು ಮೂರು ದಿನದಿಂದ ತಮ್ಮ ಕಚೇರಿ ಕಡೆ  ಮುಖಮಾಡದ ಗಂಗೂಲಿ ಸುದ್ದಿಗಾರರ ಮೇಲೆ ರೇಗಿದರು.

ಈ ಮಧ್ಯೆ, ಸಾಮಾಜಿಕ ಜಾಲತಾಣ ‘ಟ್ವಿಟ್ಟರ್‌’ನಲ್ಲಿ ಟ್ವೀಟ್ ಮಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ದೆರಿಕ್ ಒಬ್ರಿಯನ್, ‘ಇಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ದಿನ. ಮಾನವ ಹಕ್ಕು ಆಯೋಗದ ಅಧ್ಯಕ್ಷ­ರಾಗಿ ಗಂಗೂಲಿ ಅವರು ಮುಂದುವರಿ­ಯುತ್ತಿದ್ದಾರೆ.

ಸರ್, ನಿಮ್ಮ ಕಚೇರಿ­ಯನ್ನು ಅಪಹಾಸ್ಯಕ್ಕೀಡು ಮಾಡಬೇಡಿ’ ಎಂದು ಚುಚ್ಚಿದ್ದಾರೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಕೆ. ಗಂಗೂಲಿ ಅವರು, ಕಳೆದ ವರ್ಷ ದೆಹಲಿಯ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಯುವ ವಕೀಲೆ­ಯೊಬ್ಬರು ದೂರಿದ್ದರು.  ಈ ಕುರಿತು ತನಿಖೆ ನಡೆಸಿದ್ದ ಸುಪ್ರೀಂಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ­ನ್ನೊಳಗೊಂಡ ಸಮಿತಿ ಕೂಡ, ನ್ಯಾ. ಗಂಗೂಲಿ ಅವರ ವಿರುದ್ಧ ದ ಆರೋಪದಲ್ಲಿ ಸತ್ಯಾಂಶವಿದೆ ಎಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT