ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆಗೆ ಗೊಗೊಯ್‌ ನಿರ್ಧಾರ

Last Updated 16 ಮೇ 2014, 19:33 IST
ಅಕ್ಷರ ಗಾತ್ರ

ಗುವಾಹಟಿ (ಪಿಟಿಐ): ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಕಳಪೆ ಪ್ರದರ್ಶನದ ಹೊಣೆ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ತರುಣ್‌ ಗೊಗೊಯ್‌ ಶುಕ್ರವಾರ ಘೋಷಿಸಿದ್ದಾರೆ.

‘ರಾಜ್ಯದಲ್ಲಿ ಪಕ್ಷದ ಪ್ರದರ್ಶನದ ಹೊಣೆ ಹೊತ್ತು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ’ ಎಂದು ಗೊಗೊಯ್‌ ಗುವಾಹಟಿ­ಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಇದು ಭಾವನಾತ್ಮಕ ನಿರ್ಧಾರವಲ್ಲ. ಇದೊಂದು ತಾತ್ಕಾಲಿಕ ಹಿನ್ನಡೆಯಷ್ಟೇ. ಈ ಹಿಂದೆಯೂ ಇಂತಹ ಪರಿಸ್ಥಿತಿ­ಯನ್ನು ನಾನು ಕಂಡಿದ್ದೇನೆ. ನಂತರ ಪಕ್ಷವು ಪುಟಿದು ನಿಂತಿತ್ತು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT