ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್ ಹಂತಕರ ರಕ್ಷಣೆ : ಪ್ರಧಾನಿಗೆ ಕರುಣಾನಿಧಿ ಮನವಿ

Last Updated 6 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಮೂವರನ್ನು ರಕ್ಷಣೆ ಮಾಡುವಂತೆ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಡಿಎಂಕೆ ಅಧ್ಯಕ್ಷ  ಹಾಗೂ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಕರುಣಾ ನಿಧಿ ಅವರು ಮನವಿ ಮಾಡಿದ್ದಾರೆ.
ಈಗಾಗಲೇ ಮರಣದಂಡನೆಗೆ ಒಳಗಾಗಿರುವ ಮೂವರು ಅಪರಾಧಿಗಳು ಸುಮಾರು 20 ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಕರುಣಾನಿಧಿ ಹೇಳಿದ್ದಾರೆ.

ಮರಣ ದಂಡನೆ ಶಿಕ್ಷೆಯನ್ನು ಬದಲಾಯಿಸುವಂತೆ ತಮಿಳು ನಾಡು ಸರ್ಕಾರ ಗೊತ್ತುವಳಿಯೊಂದನ್ನು ಅಂಗೀಕರಿಸಿ ರಾಜ್ಯಪಾಲರಿಗೆ ಶಿಫಾರಸು ಮಾಡಿದೆ, ಆದರೆ ಅವರು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲದ ಕಾರಣ ಪ್ರಧಾನಿ ಮತ್ತು ಸೋನಿಯಾ ಗಾಂಧಿ ಅವರು ಅಗತ್ಯ ಕ್ರಮ ಕೈಗೊಳ್ಳುವಂತೆ ಕರುಣಾ ನಿಧಿ ಒತ್ತಾಯಿಸಿದ್ದಾರೆ.
 

ಪೊಲೀಸ್ ಠಾಣೆ ಬಲವರ್ಧನೆಗೆ ಅನುದಾನ
ನವದೆಹಲಿ (ಪಿಟಿಐ):
ನಕ್ಸಲ್ ಪೀಡಿತ ಪ್ರದೇಶದಲ್ಲಿರುವ 400 ಪೊಲೀಸ್ ಠಾಣೆಗಳ ಬಲವರ್ಧನೆಗೆ ಕೇಂದ್ರ ಸರ್ಕಾರವು 120 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ.

ಅನುದಾನದ ಮೊದಲ ಕಂತಾಗಿ ಪ್ರತಿ ಠಾಣೆಗೂ 30 ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ನೂತನ ಕಟ್ಟಡ ನಿರ್ಮಾಣ, ಬಂಕರ್ ನಿರ್ಮಾಣ, ಸೂಕ್ಷ್ಮ ಸಂವೇದಿ ಸಂವಹನ ಉಪಕರಣಗಳ ಖರೀದಿಗೆ ಈ ಅನುದಾನವನ್ನು ಬಳಸಬಹುದಾಗಿದೆ. ಉಳಿದ ಹಣವನ್ನು ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT