ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 16 ಫೆಬ್ರುವರಿ 2011, 9:25 IST
ಅಕ್ಷರ ಗಾತ್ರ

ಯಾದಗಿರಿ: ಜನವಿರೋಧಿ, ದಲಿತ ವಿರೋಧಿ ರಾಜ್ಯ ಸರ್ಕಾರವನ್ನು ವಜಾ ಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಡಾ.ಅಂಬೇಡ್ಕರ್ ವಾದ) ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಗಳ ಮೇಲೆ ಭ್ರಷ್ಟಾಚಾ ರದ ಮೊಕದ್ದಮೆ ದಾಖಲಾಗಿಲ್ಲ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ 6 ಪ್ರಕರಣಗಳು ದಾಖಲಾಗಿವೆ.

ತತ್ವಬದ್ಧ ರಾಜಕಾರಣಿ ಆಗಿದ್ದರೆ, ಕೂಡಲೇ ರಾಜೀನಾಮೆ ನೀಡಬೇಕಾ ಗಿತ್ತು. ಆದರೆ ಯಡಿಯೂರಪ್ಪನವರು ನೈತಿಕತೆಯನ್ನು ಬಿಟ್ಟು ರಾಜ್ಯವಾಳು ತ್ತಿದ್ದಾರೆ. ಇದು ಕರ್ನಾಟಕ ರಾಜ್ಯಕ್ಕೆ ಆದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ರಾಜ್ಯದ ಮುಖ್ಯ ಮಂತ್ರಿಗಳೇ ವಿಧಾನಸೌಧದಿಂದ ಮನೆಗೆ ವಾಪಸ್ಸು ಹಿಂದಿರುಗುವ ವಿಶ್ವಾಸವಿಲ್ಲ ಎಂದು ಹೇಳುತ್ತಿದ್ದಾರೆ. ಶೇ.90 ರಷ್ಟು ಶಾಸಕರು ತಮ್ಮ ಜೀವ ರಕ್ಷಣೆಗಾಗಿ ಪೊಲೀಸ್ ರಕ್ಷಣೆ ಕೇಳಿದ್ದಾರೆ. ಆಳುವ ವರೇ ಭಯದಲ್ಲಿರು ವಾಗ ರಾಜ್ಯದ ಜನರ ಸ್ಥಿತಿ ಏನು ಎಂದು ಪ್ರಶ್ನಿಸಿದರು.

ಕಳೆದ ಎರಡು ವರ್ಷದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಆಗಿಲ್ಲ. ರಾಜ್ಯದಾದ್ಯಂತ ದಲಿತ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚ ನೀಯವಾಗಿದೆ. ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ದೊರೆಯು ತ್ತಿಲ್ಲ. ಅಭ್ಯಾಸ ಮಾಡಲು ಅನುಕೂಲ ಕರ ವಾತಾವರಣವಿಲ್ಲ. ದಲಿತರ ಅಭಿವೃದ್ಧಿಗಾಗಿ ಇರುವ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಹೆಸರಿಗೆ ಮಾತ್ರೆ ಎನ್ನುವಂತಾಗಿದೆ ಎಂದು ದೂರಿದರು.

ರಾಜ್ಯ ಸರ್ಕಾರ ವಿವಿಧ ಯೋಜನೆ ಗಳಿಗಾಗಿ ಬಡ ರೈತರಿಂದ ಕೃಷಿ ಭೂಮಿ ಯನ್ನು ಕಿತ್ತುಕೊಂಡು, ಆ ಭೂಮಿ ಯನ್ನೇ ಡಿ-ನೋಟಿಫೈ ಮಾಡುವ ಕೃತ್ಯದಲ್ಲಿ ತೊಡಗಿರುವುದು ಈಗಾಗಲೇ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಸ್ವಜನಪಕ್ಷಪಾತ ಹಾಗೂ ಸಚಿವ ಸಂಪುಟದ ಸದಸ್ಯರು ಹಲವಾರು ಹಗರಣಗಳಲ್ಲಿ ಭಾಗಿಯಾಗಿರುವುದ ರಿಂದ ರಾಜ್ಯದ ಬಿಜೆಪಿ ಸರ್ಕಾರ ಅಧಿ ಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಕಳೆದುಕೊಂಡಿದೆ ಎಂದು ತಿಳಿಸಿದರು.

2009-10 ನೇ ಸಾಲಿನಲ್ಲಿ ದಲಿತರಿ ಗಾಗಿ ನಿಗದಿ ಮಾಡಿದ ಹಣ ಇದು ವರೆಗೂ ಖರ್ಚಾಗಿಲ್ಲ. ಮಠಗಳಿಗೆ ಬೇಕಾಬಿಟ್ಟಿ ಹಣ ಹಂಚಲಾಗುತ್ತಿದೆ. ಆದರೆ ದಲಿತರಿಗೆ ಮೀಸಲಿಟ್ಟ ಹಣವನ್ನು ಖರ್ಚು ಮಾಡಲು ಆಗುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯ ಸಮಿತಿ ಸದಸ್ಯ ನಾಗಣ್ಣ ಕಲ್ಲದೇವನಹಳ್ಳಿ, ಪರಶುರಾಮ ಬಳಬಟ್ಟಿ, ಭೀಮರಾಯ ಹೊಸಮನಿ, ರಾಜು ದೊಡಮನಿ, ರಮೇಶ ಅರಿಕೇರಿ, ಮರೆಪ್ಪ ಬೆಂಡೆಗಂಬಳಿ, ಮಲ್ಲಿಕಾರ್ಜುನ ಹೊಸಮನಿ, ಮಾಳಪ್ಪ ಕಿರದಳ್ಳಿ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT