ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ರಾಜ್ಯಕ್ಕೂ ಎಕ್ಸಲೆನ್ಸ್ ಕೇಂದ್ರ'

ಕ್ರೀಡಾ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಆಶ್ವಾಸನೆ
Last Updated 23 ಜುಲೈ 2013, 19:39 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕಕ್ಕೆ ಇನ್ನೊಂದು ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರವನ್ನು ನೀಡುವುದಾಗಿ ಕೇಂದ್ರ ಯುವಜನ ಸೇವೆ ಮತ್ತು ಕ್ರೀಡಾ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಆಶ್ವಾಸನೆ ನೀಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಮತ್ತು ಕ್ರೀಡಾ ಸಚಿವರೊಡನೆ ಮಂಗಳವಾರ ಮಾತುಕತೆ ನಡೆಸಿದ ನಂತರ ಅವರಿಗೆ ತಾವು ಈ ವಿಷಯ ತಿಳಿಸಿರುವುದಾಗಿಯೂ ಅವರು ಹೇಳಿದರು.

“ದೇಶದ ವಿವಿಧ ಕಡೆ ಒಟ್ಟು 25 ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರಗಳನ್ನು ಆರಂಭಿಸುವ ಯೋಜನೆ ಇರಿಸಿಕೊಂಡಿದ್ದೇವೆ. ಬೆಂಗಳೂರು ನಗರದಲ್ಲಿ ಅಂತಹದ್ದೊಂದು ಕೇಂದ್ರ ಆರಂಭಿಸಲಿಕ್ಕೆ ಅಗತ್ಯವಾದ ಸೌಲಭ್ಯಗಳಿವೆ” ಎಂದೂ ಅವರು ತಿಳಿಸಿದರು.

`ಇವತ್ತು ದೇಶದಲ್ಲಿ ಪ್ರತಿಭಾನ್ವೇಷಣೆಗೆ ಹೆಚ್ಚು ಒತ್ತು ಸಿಗಬೇಕಿದೆ. ಈ ದಿಸೆಯಲ್ಲಿ ಸರ್ಕಾರ ವಿಶಿಷ್ಠ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ' ಎಂದರು.

`ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರಗಳಲ್ಲಿ 9 ಕ್ರೀಡೆಗಳಲ್ಲಿ ವಿಶೇಷ ತರಬೇತಿ ನೀಡಲಾಗುವುದು. ಜತೆಗೆ ಇತರ ಏಳು ಅಥವಾ ಎಂಟು ಕ್ರೀಡೆಗಳ ಬಗ್ಗೆಯೂ ತರಬೇತಿ ನೀಡಲಾಗುವುದು' ಎಂದರು.

ಇದಲ್ಲದೆ ಭಾರತದಲ್ಲಿ ಕ್ರೀಡಾಭಿವೃದ್ಧಿಯ ನಿಟ್ಟಿನಲ್ಲಿ ಭಾರತ ಕ್ರೀಡಾ ಪ್ರಾಧಿಕಾರದ ಕೇಂದ್ರಗಳ ಕೊಡುಗೆ ಬಲು ದೊಡ್ಡದು ಎಂದ ಅವರು ಮುಂದಿನ ದಿನಗಳಲ್ಲಿ ಇಂತಹ ಕೇಂದ್ರಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT