ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ಕಾಂಗ್ರೆಸ್ ಅನಿವಾರ್ಯ: ಮಂಜುನಾಥ

Last Updated 21 ಡಿಸೆಂಬರ್ 2012, 8:43 IST
ಅಕ್ಷರ ಗಾತ್ರ
ಬಾಗಲಕೋಟೆ: ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ರಾಜ್ಯಕೆ ಕಾಂಗ್ರೆಸ್ ಸರ್ಕಾರವೇ ಅನಿವಾರ್ಯ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎನ್.ಮಂಜುನಾಥ ಅಭಿಪ್ರಾಯಪಟ್ಟರು.
 
ನಗರದ ಅನುಗ್ರಹ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡಗಳ ವಿಭಾಗದ ಜಿಲ್ಲಾ ಮತ್ತು ಬ್ಲಾಕ್ ಸಮಿತಿ ಪದಾಧಿಕಾರಿಗಳ, ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
 
ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ನಡುವಿನ ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್ ಅನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸುಮಾರು 150 ಸ್ಥಾನಗಳಲ್ಲಿ ಜಯಸಾಧಿಸುವ ಮೂಲಕ ಸರ್ಕಾರ ರಚಿಸಿಲಿದೆ ಎಂದು ಭವಿಷ್ಯ ನುಡಿದರು.
 
30ರಂದು ಸಮಾವೇಶ: ಕೆ.ಪಿ.ಸಿ.ಸಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಬಿ. ತಿಮ್ಮೋಪುರ ಮಾತನಾಡಿ, ಬಿಜೆಪಿಯು ಜಾತಿ-ಜಾತಿಗಳನ್ನು ಒಡೆದು ಹಿಂದುಳಿದ, ಅಲ್ಪಸಂಖ್ಯಾತ ಮತ್ತು ದಲಿತ ಸಮುದಾಯವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು. ಇದೇ 30ರಂದು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಡೆಯುವ ಬೆಳಗಾವಿ ವಿಭಾಗಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು  ಎಂದರು
 
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಸೌದಾಗರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಚ್.ವೈ.ಮೇಟಿ, ಬಿ.ಬಿ.ಚಿಮ್ಮನಕಟ್ಟಿ, ಮಾಜಿ ಶಾಸಕರಾದ ಜೆ.ಟಿ.ಪಾಟೀಲ, ಹಿಂದುಳಿದ ವರ್ಗಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ದೇವರಾಜ ಪಾಟೀಲ, ಕಿಸಾನ್ ಘಟಕದ ರಾಜ್ಯ ಸಂಚಾಲಕ ಎಂ.ಬಿ. ಹಂಗರಗಿ ಇತರರು ಹಾಜರಿದ್ದರು.
 
ಬಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ  ಅಜಯಕುಮಾರ ಸರನಾಯಕ ಅವರನ್ನು ಸಭೆಯಲ್ಲಿ  ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT