ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಹಲವೆಡೆ ಮಳೆ

Last Updated 21 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಕರಾವಳಿಯ ಹಲವೆಡೆ ಮಳೆಯಾಗಿದೆ.

ಶಿಕಾರಿಪುರದಲ್ಲಿ ಅತಿ ಹೆಚ್ಚು 8 ಸೆಂ.ಮೀ ಮಳೆಯಾಗಿದ್ದು, ಉಡುಪಿ, ಅರಸಾಳು 4 ಸೆಂ.ಮೀ, ತ್ಯಾಗರ್ತಿ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ 3, ಮುಲ್ಕಿ, ಹಾನಗಲ್, ಗುತ್ತಲ, ಮುನಿರಾಬಾದ್, ಹೊಸನಗರ, ಹುಂಚದಕಟ್ಟೆ, ಹೊಳಲೂರು, ಭದ್ರಾವತಿ, ಜಯಪುರ, ಕಮ್ಮರಡಿ, ಬಾಳೆಹೊನ್ನೂರು, ಬೆಲೂರು, ಮಲೆಮಹಾದೇಶ್ವರ ಬೆಟ್ಟ, ಹೊಸಪೇಟೆ, ಹಡಗಲಿ, ಹೊನ್ನಾಳಿ, ಚನ್ನಗಿರಿ 2 ಸೆಂ.ಮೀ ಮಳೆಯಾಗಿದೆ.
ಬೀದರ್‌ನಲ್ಲಿ ಅತಿ ಹೆಚ್ಚು ಉಷ್ಣಾಂಶ 31.2 ಡಿಗ್ರಿ ಸೆಲ್ಸಿಯಸ್ ಮತ್ತು ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ:  ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಹಲವೆಡೆ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT