ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರ ಜತೆ ಚರ್ಚೆ: ದೇಶಪಾಂಡೆ

ಪ್ರೇಮ್‌ಜಿ ವಿಶ್ವವಿದ್ಯಾಲಯ
Last Updated 1 ಜುಲೈ 2013, 20:11 IST
ಅಕ್ಷರ ಗಾತ್ರ

ಬೆಂಗಳೂರು: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಬಡವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಬದ್ಧತೆ ತೋರಿಲ್ಲ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಅವರೊಂದಿಗೆ ಮಾತನಾಡುತ್ತೇನೆ. ಅಗತ್ಯಬಿದ್ದರೆ ಈ ಬಗ್ಗೆ ವಿಚಾರಣೆ ನಡೆಸಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ರಾಜ್ಯಪಾಲರ ಹೇಳಿಕೆ ಕುರಿತು ಸೋಮವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, `ಪರಿಶೀಲನೆ ನಡೆಸದೆ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ಅವರೊಂದಿಗೆ ಮಾತನಾಡುತ್ತೇನೆ' ಎಂದರು.

ಖಾಲಿ ಹುದ್ದೆ ಭರ್ತಿ: ರಾಜ್ಯದಲ್ಲಿನ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಒಟ್ಟು 900 ಬೋಧಕ ಹುದ್ದೆಗಳು ಖಾಲಿ ಇದ್ದು, ಈ ಪೈಕಿ  428 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ 154 ಬ್ಯಾಕ್‌ಲಾಗ್ ಹುದ್ದೆಗಳೂ ಸೇರಿವೆ. ಕೆಪಿಎಸ್‌ಸಿ ಕೆಲವೊಂದು ಸ್ಪಷ್ಟನೆಗಳನ್ನು ಕೇಳಿದ್ದು, ಆ ಮಾಹಿತಿಯನ್ನು ಕಳುಹಿಸಿಕೊಡುವಂತೆ ಕಾಲೇಜು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

2006-07ರಲ್ಲಿ ಹೊಸದಾಗಿ 167 ಸರ್ಕಾರಿ ಪದವಿ ಕಾಲೇಜುಗಳು ಆರಂಭವಾಗಿದ್ದು, ಆ ಕಾಲೇಜುಗಳಲ್ಲಿ 53 ವಿಷಯ 2,259 ಹುದ್ದೆಗಳನ್ನು ಸೃಜಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಲಾಖೆಯಲ್ಲಿ ಬೋಧಕ - ಬೋಧಕೇತರ ಹುದ್ದೆ ತುಂಬುವ ಅಗತ್ಯವಿದ್ದು, ಆರ್ಥಿಕ ನಿರ್ಬಂಧ ಹೇರಬಾರದು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿರುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT